ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ವಿಪ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ಕ್ಷೇತ್ರ ವ್ಯಾಪ್ತಿಯಲ್ಲಿನ ಕಾರವಾರ-ಇಳಕಲ್ ರಜ್ಯ ಹೆದ್ದಾರಿ ಅಭಿವೃದ್ಧಿ, ನೀರಾವರಿ, ರೇಲ್ವೆ ಯೋಜನೆ ಸೇರಿ ಮುಖ್ಯವಾಗಿ ಆಗಬೇಕಾಗಿರುವ ಕಾರ್ಯಗಳ ಬಗ್ಗೆ ಮನವಿ ಮಾಡಿದರು.