HomeCrime Newsಶಾಸಕ ರಾಜು ಕಾಗೆ ಸಹೋದರನ ಪುತ್ರನಿಂದ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಾಸಕ ರಾಜು ಕಾಗೆ ಸಹೋದರನ ಪುತ್ರನಿಂದ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

For Dai;y Updates Join Our whatsapp Group

Spread the love

ಬೆಳಗಾವಿ: ಶಾಸಕ ರಾಜು ಕಾಗೆ ಸಹೋದರನ ಪುತ್ರನಿಂದ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ಗೋಕಾಕ್ ನ ಬಸವರಾಜ ಪುಡಕಲಕಟ್ಟಿ(22) ಮೃತ ದುರ್ದೈವಿಯಾಗಿದ್ದು,

ಬಸವರಾಜ ಮತ್ತು ಇಬ್ಬರು ಸ್ನೇಹಿತರು ಬೆಳಗಾವಿಯಿಂದ ಕಿತ್ತೂರಿಗೆ ಬೈಕ್ ಮೇಲೆ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಶಾಸಕ ರಾಜು ಕಾಗೆ ಸಹೋದರನ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಬೈಕ್‌ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಸಣ್ಣವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತ ಬಸವರಾಜ ಮೃತದೇಹ ಶಿಪ್ಟ್ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!