HomeKarnataka Newsಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ!

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ!

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಕಡಿಮೆಯಾಗಿದ್ದರೂ ಕೂಡ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಾತ್ರ ಒಣಹವೆ ಮುಂದುವರಿಯಲಿದೆ. ಬಂಡೀಪುರ, ಹೊಸಕೋಟೆ, ಜೇವರಗಿ, ಶಾಹಪುರ, ಶೋರಾಪುರಗಳಲ್ಲಿ ಮಳೆಯಾದ ವರದಿಯಾಗಿದೆ. ಮೈಸೂರಿನಲ್ಲಿ ಕನಿಷ್ಠ 18.2 ಡಿಗ್ರಿ ಸೆಲ್ಸಿಯಸ್ ತಂಪು ಉಷ್ಣಾಂಶ ದಾಖಲಾಗಿದ್ದು, ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾದರೆ, ಶುಕ್ರವಾರವೂ ಮೋಡಕವಿದ ವಾತಾವರಣ ಕಂಡುಬಂದಿದೆ.

ಎಚ್​ಎಎಲ್​ನಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!