HomeKarnataka Newsಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ: ಇಂದು ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ರಜೆ!

ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ: ಇಂದು ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ರಜೆ!

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಬಿರುಗಾಳಿ ಬೀಸುವ ಎಚ್ಚರಿಕೆಯನ್ನೂ ಇಲಾಖೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಹವಾಮಾನ ಇಲಾಖೆ ಪ್ರಕಾರ ಜುಲೈ 24ರಂದೂ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಜಗಲ್‌ಬೆಟ್‌ನಲ್ಲಿ 22 ಸೆಂ.ಮೀ. ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 7 ಸೆಂ.ಮೀ., ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 6 ಸೆಂ.ಮೀ., ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯಲ್ಲಿ 6 ಸೆಂ.ಮೀ., ಪುತ್ತೂರು ಹಾಗೂ ಸುಬ್ರಹ್ಮಣ್ಯದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ. ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಹಾಗೂ ಮೂಡುಬಿದಿರೆಯಲ್ಲಿ ತಲಾ 3 ಸೆಂ.ಮೀ. ಮತ್ತು ರಾಯಚೂರು ಜಿಲ್ಲೆಯ ಕುರ್ಡಿಯಲ್ಲಿ 3 ಸೆಂ.ಮೀ. ಮಳೆಯಾಗಿದೆ.

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 23ರಂದು ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ನಿರಂತರ ಮಳೆಯಿಂದ ಭೂಕುಸಿತ ಹಾಗೂ ಪ್ರವಾಹದ ಆತಂಕ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img