HomeKarnataka Newsಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

For Dai;y Updates Join Our whatsapp Group

Spread the love

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವೆ ಆರಂಭಗೊಂಡ ಸಂಘರ್ಷ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು,

ಯಾವೆಲ್ಲಾ ಸೆಕ್ಷನ್ ದಾಖಲು?
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್​ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!