HomeIndia News11 ವರ್ಷದ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿ ಕೊಲೆ: ಪಾಪಿ ತಂದೆ ಅರೆಸ್ಟ್!

11 ವರ್ಷದ ಅವಳಿ ಹೆಣ್ಣುಮಕ್ಕಳ ಕತ್ತು ಸೀಳಿ ಕೊಲೆ: ಪಾಪಿ ತಂದೆ ಅರೆಸ್ಟ್!

For Dai;y Updates Join Our whatsapp Group

Spread the love

ಕಾನ್ಪುರ: ತಂದೆಯೊಬ್ಬ ತನ್ನ 11 ವರ್ಷದ ಅವಳಿ ಹೆಣ್ಣುಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಮೃತರನ್ನು ರಿದ್ಧಿ ಮತ್ತು ಸಿದ್ಧಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು 48 ವರ್ಷದ ಮೆಡಿಕಲ್ ರೆಪ್ ಶಶಿ ರಂಜನ್ ಮಿಶ್ರಾ ಎಂದು ಗುರುತಿಸಲಾಗಿದೆ. ಆತ ತನ್ನ ಇಬ್ಬರು ಪುತ್ರಿಯರ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಳಿಕ ಆರೋಪಿ ತಾನೇ ಪೊಲೀಸರಿಗೆ ಕರೆ ಮಾಡಿ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಇಬ್ಬರು ಬಾಲಕಿಯರ ಶವಗಳು ಮನೆಯಲ್ಲಿ ರಕ್ತದ ಮಡುವಿನಲ್ಲಿ ಪತ್ತೆಯಾಗಿವೆ.

ಮೃತರ ಕುಟುಂಬ ಬಿಹಾರ ಮೂಲದವರಾಗಿದ್ದು, ಪತ್ನಿ ರೇಷ್ಮಾ, ಅವಳಿ ಹೆಣ್ಣುಮಕ್ಕಳು ಮತ್ತು ಆರು ವರ್ಷದ ಮಗನೊಂದಿಗೆ ಕಾನ್ಪುರದಲ್ಲಿ ವಾಸವಾಗಿದ್ದರು. ಆರೋಪಿ ಪತ್ನಿಯ ಮೇಲೆ ಅನೈತಿಕ ಸಂಬಂಧದ ಶಂಕೆ ಹೊಂದಿದ್ದನೆಂದು ತಿಳಿದುಬಂದಿದೆ. ಈ ಕಾರಣದಿಂದ ಮನೆಯಲ್ಲಿ ನಿರಂತರ ಕಲಹ ನಡೆಯುತ್ತಿತ್ತು ಎಂದು ಪತ್ನಿ ಆರೋಪಿಸಿದ್ದಾರೆ.

ಪತ್ನಿ ರೇಷ್ಮಾ ಅವರ ಪ್ರಕಾರ, ಆರೋಪಿ ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಎಲ್ಲರ ಮೇಲೂ ನಿಗಾ ಇಟ್ಟಿದ್ದನು. ಜೊತೆಗೆ ಹೆಣ್ಣುಮಕ್ಕಳಿದ್ದ ಕೋಣೆಗೆ ಯಾರನ್ನೂ ಹೋಗಲು ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಶನಿವಾರ ರಾತ್ರಿ ಊಟದ ನಂತರ ಮಕ್ಕಳನ್ನು ಮಲಗಿಸಲು ಕರೆದೊಯ್ದ ಆರೋಪಿ, ನಂತರ ಭೀಕರ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!