ರಾಯಚೂರು: ಬೆಳ್ಳಂಬೆಳಿಗ್ಗೆ ಬಿಸಿಲು ನಾಡು ರಾಯಚೂರಿನಲ್ಲಿ ಕಾಂಗ್ರೆಸ್ ಮುಖಂಡನ ಕೊಲೆಯ ಬಗ್ಗೆ ವರದಿಯಾಗಿದೆ.
ಬೆಳಿಗ್ಗೆ ಹೊಲಕ್ಕೆ ನೀರು ಕಟ್ಟಲು ಹೋದಾಗ ಏಕಾಏಕಿ ಬಂದ ನಾಲ್ಕೈದು ದುಷ್ಕರ್ಮಿಗಳಿಂದ ಕೈ ಮುಖಂಡ ಪ್ರಸಾದ್‌ನ ಕೊಲೆಯಾಗಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ್ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು,
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆಯ ದ್ವೇಷಕ್ಕೆ ಕೊಲೆಯ ಮಾಡಿರುವ ಶಂಕೆಯಿದ್ದು,
ರೊಚ್ಚಿಗೆದ್ದ ಗ್ರಾಮಸ್ಥರು ಮಾನ್ವಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಘಟನಾ ಸಂಬಂಧ ಮಾನ್ವಿ ಠಾಣೆಯಲ್ಲಿ 12 ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿಗಳಾಗಿ ಪತ್ತೆ ಕಾರ್ಯ ಮುಂದುವರೆದಿದೆ.



