ವಿಜಯಸಾಕ್ಷಿ ಸುದ್ದಿ, ಗದಗ : ಕನ್ನಡ ಮತ್ತು ಕಲಾಭಿವೃದ್ಧಿ ಸೇವಾ ಸಂಸ್ಥೆಯ ಶ್ರೀ ರಾಜೇಶ್ವರಿ ಕಲಾ ಕುಟೀರದ ೨೩ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ ಸಂಗೀತ ನೃತ್ಯೋಲ್ಲಾಸ ಕಾರ್ಯಕ್ರಮವನ್ನು ತ್ರಿವಿಧ ದಾಸೋಹಿ ಪೂಜ್ಯಶ್ರೀ ಮನ್ನಿರಂಜನ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ನಿವೃತ್ತ ಪ್ರಾಚಾರ್ಯ ಜಿ.ಬಿ. ಪಾಟೀಲ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಶೇಖಣ್ಣ ಕಳಸಾಪೂರ, ಕಲಾ ಕುಟೀರದ ಅಧ್ಯಕ್ಷ ಗಜಾನನ ವೆರ್ಣೇಕರ, ಅಂದಾನಪ್ಪ ವಿಭೂತಿ ಮುಂತಾದವರು ಉಪಸ್ಥಿತರಿದ್ದರು.



