HomeKarnataka Newsನಮ್ಮ ಮೆಟ್ರೋ ದರ ಏರಿಕೆ: ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ - ಸಿಎಂ ಸಿದ್ದರಾಮಯ್ಯ

ನಮ್ಮ ಮೆಟ್ರೋ ದರ ಏರಿಕೆ: ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ – ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ ತಟ್ಟಿದೆ. ಈ ಮೆಟ್ರೋ ದರ ಏರಿಕೆಯಿಂದಾಗಿ ಸದ್ಯ ಜನರೂ ಕೂಡಾ ರೊಚ್ಚಿಗೆದ್ದಿದ್ದು, ಹಲವರು ಇಷ್ಟೊಂದು ದರ ಏರಿಕೆ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮೆಟ್ರೋ ಟಿಕೆಟ್​ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಮೆಟ್ರೋ ದರ ಏರಿಕೆ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ.

ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ.

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!