HomeGadag Newsಎಸ್‌ಎಸ್‌ಕೆ ಸಮಾಜವು ಜೇನು ಗೂಡಿನಂತೆ : ರತ್ನಾಬಾಯಿ ಬದಿ

ಎಸ್‌ಎಸ್‌ಕೆ ಸಮಾಜವು ಜೇನು ಗೂಡಿನಂತೆ : ರತ್ನಾಬಾಯಿ ಬದಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಎಸ್‌ಎಸ್‌ಕೆ ಸಮಾಜವು ಜೇನು ಗೂಡು ಇದ್ದಂತೆ. ಎಲ್ಲರೂ ಒಂದಾಗಿ ಸಮಾಜವನ್ನು ಮುನ್ನಡೆಸೋಣ ಎಂದು ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ರತ್ನಾಬಾಯಿ ಬದಿ ಹೇಳಿದರು.

ನಗರದ ಹಳೇ ಸರಾಫ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ದಸರಾ ದರಬಾರ ವೇದಿಕೆಯಲ್ಲಿ ಜರುಗಿದ `ನಮ್ಮೂರು ದಸರಾ-2024′ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಅವರು ಸನ್ಮಾನಿಸಿ ಸ್ವೀಕರಿಸಿ ಮಾತನಾಡಿದರು.

ಈ ಬಾರಿ ಗದಗ ಎಸ್‌ಎಸ್‌ಕೆ ಸಮಾಜದ ವತಿಯಿಂದ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಇದೇ ರೀತಿ ಸಮಾಜದ ಎಲ್ಲ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕು. ನಾನು ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆಯಲು ಎಸ್‌ಎಸ್‌ಕೆ ಸಮಾಜ ಬಾಂಧವರ ಪ್ರೋತ್ಸಾಹ ಸಾಕಷ್ಟಿರುವದರಿಂದ ನನ್ನ ಪ್ರಶಸ್ತಿಯನ್ನು ಎಸ್‌ಎಸ್‌ಕೆ ಸಮಾಜಕ್ಕೆ ಅರ್ಪಿಸುತ್ತೇನೆ ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ‍್ಯಾಂಕ್ ಹಾಗೂ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸಮೃದ್ಧಿ ಶಿದ್ಲಿಂಗ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಎಸ್.ಎಸ್.ಕೆ ಸಮಾಜ ಪಂಚ ಕಮಿಟಿ ಅಧ್ಯಕ್ಷ ಫಕೀರಸಾ ಬಾಂಡಗೆ ವಹಿಸಿದ್ದರು. ಅತಿಥಿಗಳಾಗಿ ನಗರದ ಗಣ್ಯ ವ್ಯಾಪಾರಸ್ಥರಾದ ಮಹಾವೀರ ಸಾಳುಂಕೆ, ಅವಿನಾಶ ಜೈನ್, ಅರವಿಂದ ಓಸ್ವಾಲ, ಪಂಚ ಕಮಿಟಿಯ ಉಪಾಧ್ಯಕ್ಷ ರಾಜು ಬದಿ, ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ, ರವಿ ಶಿದ್ಲಿಂಗ, ದಸರಾ ಕಮಿಟಿಯ ಚೇರಮನ್ ವಿಷ್ಣುಸಾ ಶಿದ್ಲಿಂಗ ಪಾಲ್ಗೊಂಡಿದ್ದರು.

ಪಂಚ ಕಮಿಟಿಯ ಸದಸ್ಯರಾದ ಸುರೇಶಕುಮಾರ ಬದಿ, ಮಾರುತಿ ಪವಾರ, ಮೋತಿಲಾಲಸಾ ಪೂಜಾರಿ, ಪರಶುರಾಮಸಾ ಬದಿ, ಅನಿಲ್ ಖಟವಟೆ, ಅಂಬಾಸಾ ಖಟವಟೆ, ವಾಸುದೇವಸಾ ಖಟವಟೆ, ಮೋಹನಸಾ ಪವಾರ, ವಿಶ್ವನಾಥಸಾ ಸೋಳಂಕಿ, ಸಾಗರ ಪವಾರ, ಶ್ರೀಕಾಂತ ಬಾಕಳೆ, ಸತೀಶ ದೇವಳೆ, ರಾಘವೇಂದ್ರ ಬಾಂಡಗೆ, ನಾಗರಾಜ ಖೋಡೆ, ಉಮಾಬಾಯಿ ಬೇವಿನಕಟ್ಟಿ, ಸ್ನೇಹಲತಾ ಕಬಾಡಿ ಮುಂತಾದವರು ಉಪಸ್ಥಿತರಿದ್ದರು.
ಜಿ.ಎನ್. ಹಬೀಬ ನಿರೂಪಿಸಿದರು. ಪ್ರಕಾಶ ಬಾಕಳೆ ವಂದಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!