ನವದೆಹಲಿ:- ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಕೇಸ್ ಗೆ ಸಂಬಂಧಿಸಿದಂತೆ ಸೋನಿಯಾ ಹಾಗೂ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲಾಗಿದೆ.
ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಹೊಸ ಎಫ್‌ಐಆರ್ ದಾಖಲಿಸಿದೆ. ಸೋನಿಯಾ, ರಾಹುಲ್ ಜೊತೆಗೆ ಇತರ 6 ವ್ಯಕ್ತಿಗಳು ಹಾಗೂ ಮೂರು ಕಂಪನಿಗಳನ್ನು ಸಹ ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ.
ಕಾಂಗ್ರೆಸ್‌ಗೆ ಸಂಬಂಧಿಸಿದ ಕಂಪನಿಯಾದ ಎಜೆಎಲ್ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ಅನ್ನು ವಂಚನೆಯಿಂದ ಸ್ವಾಧೀನಪಡಿಸಿಕೊಳ್ಳಲು ಕ್ರಿಮಿನಲ್ ಪಿತೂರಿ ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯದ (ಇಡಿ) ದೂರಿನ ಆಧಾರದ ಮೇಲೆ ಅಕ್ಟೋಬರ್ 3 ರಂದು ಈ ಎಫ್‌ಐಆರ್ ದಾಖಲಿಸಲಾಗಿದೆ. ಇಡಿ ತನ್ನ ತನಿಖಾ ವರದಿಯನ್ನ ದೆಹಲಿ ಪೊಲೀಸರೊಂದಿಗೆ ಹಂಚಿಕೊಂಡಿದೆ ಎಂದು ತಿಳಿದು ಬಂದಿದೆ.



