ನೆಲಮಂಗಲ:– ಹಿರಿಯ ನಟಿ ಲೀಲಾವತಿ ಎಸ್ಟೇಟ್ ಬಳಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಜರುಗಿದೆ.
ಅರಣ್ಯ ಪ್ರದೇಶ ಹಾಗೂ ಅಕ್ಕಪಕ್ಕದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿನೋದ್ ರಾಜ್ ತೋಟದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವ ಮೊದಲೇ ತೋಟದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಸ್ವಲ್ಪ ಯಾಮಾರಿದ್ದರೂ ಕೂಡ ಬೆಂಕಿ ಸಂಪೂರ್ಣವಾಗಿ ಲೀಲಾವತಿ ಎಸ್ಟೇಟ್ ಹಾಗೂ ತೋಟಕ್ಕೆ ಆವರಿಸಿಕೊಳ್ಳುತ್ತಿತ್ತು.
ಬೇಸಿಗೆ ಹಿನ್ನೆಲೆ ಒಣಗಿದ ಅರಣ್ಯದಿಂದ ಕಾಡ್ಗಿಚ್ಚು ಉಂಟಾಗಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಸಂಪೂರ್ಣವಾಗಿ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.



