HomeIndia Newsಡೀಸೆಲ್ ಖರೀದಿಗೆ ಕೇಂದ್ರದಿಂದ ಹೊಸ ಮಿತಿ: ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಮಾತ್ರ

ಡೀಸೆಲ್ ಖರೀದಿಗೆ ಕೇಂದ್ರದಿಂದ ಹೊಸ ಮಿತಿ: ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಮಾತ್ರ

For Dai;y Updates Join Our whatsapp Group

Spread the love

ನವದೆಹಲಿ: ಡೀಸೆಲ್ ಅಕ್ರಮ ದಾಸ್ತಾನು ಹಾಗೂ ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಡೀಸೆಲ್ ಮಾರಾಟಕ್ಕೆ ಹೊಸ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಇದರಂತೆ, ಪೆಟ್ರೋಲ್ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ವಾಣಿಜ್ಯ, ಕೈಗಾರಿಕಾ ಹಾಗೂ ಸಾಂಸ್ಥಿಕ ಬಳಕೆದಾರರು ಇನ್ನು ಮುಂದೆ ಸಾಮಾನ್ಯ ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ಖರೀದಿಸಲು ಅವಕಾಶ ಇರುವುದಿಲ್ಲ. ಅವರು ವಾಣಿಜ್ಯ ಉದ್ದೇಶಕ್ಕಾಗಿ ನಿಗದಿಪಡಿಸಲಾದ ವಿಶೇಷ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಪ್ರಸ್ತುತ ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ದರ ಲೀಟರ್‌ಗೆ 95.20 ರೂ. ಇದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಅದು 134.50 ರೂ. ಆಗಿದೆ. ರಿಟೇಲ್ ಬಂಕ್‌ಗಳಲ್ಲಿ ದರ ಕಡಿಮೆ ಇರುವುದರಿಂದ ದೊಡ್ಡ ವಾಹನಗಳ ಮಾಲೀಕರು ಹಾಗೂ ವಾಣಿಜ್ಯ ಬಳಕೆದಾರರು ಅಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಡೀಸೆಲ್ ಖರೀದಿಸುತ್ತಿರುವುದು ಗಮನಕ್ಕೆ ಬಂದಿತ್ತು. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.

ಇನ್ನೊಂದು ಪ್ರಮುಖ ನಿಯಮದಂತೆ, ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ಅನ್ನು ನೇರವಾಗಿ ವಾಹನದ ಇಂಧನ ಟ್ಯಾಂಕ್‌ಗೆ ಮಾತ್ರ ತುಂಬಿಸಬೇಕು. ಕ್ಯಾನ್, ಬ್ಯಾರೆಲ್ ಅಥವಾ ಇತರೆ ಪಾತ್ರೆಗಳಲ್ಲಿ ಡೀಸೆಲ್ ಮಾರಾಟ ಮಾಡುವುದಕ್ಕೆ ಅವಕಾಶ ಇರುವುದಿಲ್ಲ. ಆದರೆ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ (PESO) ಅನುಮೋದಿಸಿರುವ ವಿಶೇಷ ಕ್ಯಾನ್‌ಗಳಲ್ಲಿ ಮಾತ್ರ ಡೀಸೆಲ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಜಾಗತಿಕ ತೈಲ ಪೂರೈಕೆ ಸರಪಳಿಯಲ್ಲಿ ಒತ್ತಡ ಉಂಟಾಗಿದ್ದು, ಅದರ ಪರಿಣಾಮ ಭಾರತದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಮಿತಿಗಳನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!