ಗದಗ: ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಇಂಜಿನಿಯರ್ ಒಬ್ಬರು ಖಾಸಗಿ ಲಾಡ್ಜ್‌ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.ಹೊಸ ಬಸ್ ನಿಲ್ದಾಣದ ಬಳಿ ಇರುವ ಪಲ್ಲವಿ ಹೋಟೆಲ್ ನ ರೂಮ್ ಒಂದರಲ್ಲಿ ಈ ಘಟನೆ ಜರುಗಿದೆ.
ಹಾತಲಗೇರಿ ನಾಕಾ ಬಳಿಯ ನಿವಾಸಿ, ಗದಗ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಇಂಜಿನಿಯರ್ ಆಗಿದ್ದ ಶಂಕರ್‌ಗೌಡ ಪಾಟೀಲ (54) ಪ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ.
ಗದಗ ಜಿಲ್ಲೆಯ ರೋಣ ತಾಲೂಕಿನ ನಿರ್ಮಿತಿ ಕೇಂದ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಶಂಕರ್‌ಗೌಡ ಪಾಟೀಲ ಇಂದು ಮುಂಜಾನೆ ಸೈಟ್ ಕಡೆ ಹೋಗಿ ಬರ್ತೀನಿ ಅಂತ ಮನೆಯಲ್ಲಿ ಹೇಳಿ ಹೋಗಿದ್ದರು ಎನ್ನಲಾಗಿದೆ.
ಸುದ್ದಿ ತಿಳಿದ ಬೆಟಗೇರಿ ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.



