HomeKarnataka Newsಭೂ-ಪರಿವರ್ತನೆ, ಕಟ್ಟಡ ನಿರ್ಮಾಣಕ್ಕೆ ತೊಂದರೆಯಿಲ್ಲ: ಸಚಿವ ರಹಿಂ ಖಾನ್

ಭೂ-ಪರಿವರ್ತನೆ, ಕಟ್ಟಡ ನಿರ್ಮಾಣಕ್ಕೆ ತೊಂದರೆಯಿಲ್ಲ: ಸಚಿವ ರಹಿಂ ಖಾನ್

For Dai;y Updates Join Our whatsapp Group

Spread the love

ಬೆಳಗಾವಿ: ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮಠಾಣಾ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲಾಗುತ್ತಿದ್ದು, ಇದರಿಂದಾಗಿ ಭೂ-ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ತಿಳಿಸಿದರು.

ಪರಿಷತ್ತಿನಲ್ಲಿ ಡಿ.09ರಂದು ಪದವೀಧರರ ಕ್ಷೇತ್ರದ ಸದಸ್ಯರಾದ ರಾಮೋಜಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 29 (239)ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಅಧಿಕೃತ ನಿವೇಶನ ಕಟ್ಟಡಗಳಿಗೆ ನಮೂನೆ -3 ಮತ್ತು ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದ ಸ್ವತ್ತುಗಳಿಗೆ ನಮೂನೆ 3-ಎ ನೀಡಲಾಗುತ್ತಿದೆ.

ಕಟ್ಟಡ ಪರವಾನಿಗೆಯನ್ನು ತ್ವರಿತ ಪಾರದರ್ಶಕವಾಗಿ ನೀಡಲು ಎಸ್.ಬಿ.ಪಿ.ಎ.ಎಸ್./ ಯುಎಲ್‍ಎಮ್‍ಎಸ್ ತಂತ್ರಾಂಶವನ್ನು ಬಳಕೆ ಮಾಡಲಾಗುತ್ತಿದೆ. ಕಟ್ಟಡ ಪರವಾನಿಗೆ ಕೋರಿ ಆರ್ಕಿಟೆಕ್ಟ್ ಮುಖಾಂತರ ತಂತ್ರಾಂಶದಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ 15 ದಿನಗಳ ಒಳಗಾಗಿ ಕಟ್ಟಡ ಪರವಾನಿಗೆ ನೀಡಲಾಗುತ್ತಿದೆ. ತಂತ್ರಾಂಶವನ್ನು ಬಳಕೆ ಮಾಡುವಾಗ ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿ ಮೂಲಕ ಪರಿಹರಿಸಲಾಗುತ್ತಿದೆ.

ಖಾತಾ ಪಡೆಯಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೌರಾಡಳಿತ ನಿರ್ದೇಶನಾಲಯದಿಂದ ಪ್ರಮಾಣಿತ ಕಾರ್ಯವಿಧಾನ ಹೊರಡಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಕಾವೇರಿ 2.0 ತಂತ್ರಾಂಶ ಮತ್ತು ಇ-ಆಸ್ತಿ ತಂತ್ರಾಂಶಗಳನ್ನು ಜೋಡಣೆ ಮಾಡಲಾಗಿದೆ.

ಇದರಿಂದ ಹಕ್ಕು ವರ್ಗಾವಣೆ ವಿಧಾನವನ್ನು ಸರಳಿಕರಣಗೊಳಿಸಲಾಗಿದ್ದು, ಹಕ್ಕು ವರ್ಗಾವಣೆಯಂತೆ ಗಣಕೀಕೃತ ನಮೂನೆ-3ನ್ನು ಸುಲಭವಾಗಿ ಪಡೆಯಬಹುದಾಗಿದೆ. ಕಟ್ಟಡ ಪರವಾನಿಗೆ ಹಾಗೂ ನಮೂನೆ-3ನ್ನು ನೀಡುತ್ತಿರುವುದರಿಂದ ನಗರ ಸ್ಥಳೀಯ ಸಂಸ್ಥೆಗಳ ಆದಾಯಕ್ಕೆ ಕೊರತೆಯಾಗಿರುವುದಿಲ್ಲ ಎಂದು ಸಚಿವರು ತಿಳಿಸಿದರು.

ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮಠಾಣಾ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಪರವಾನಿಗೆಯನ್ನು ಈ ಹಿಂದಿನಂತೆಯೇ ಮುಂದುವರೆಸಲಾಗಿರುತ್ತದೆ. ಅನುಮೋದನೆ ಪಡೆಯದ/ಅನಧಿಕೃತ ಸ್ವತ್ತುಗಳಿಗೆ ನಮೂನೆ-3ಎ ನೀಡಿ, ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಆಸ್ತಿಕರ ವಸೂಲಿ ಮಾಡಲಾಗುತ್ತಿದೆ. ಆದರೆ, ಕಟ್ಟಡ ಪರವಾನಿಗೆ ನೀಡಲು ಪ್ರಸ್ತುತ ಅವಕಾಶವಿರುವುದಿಲ್ಲ ಎಂದು ಸಚಿವರು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!