ಬೆಂಗಳೂರು: ರಾಜ್ಯದ ಬೆಂಗಳೂರು ನಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ಈ ಬಾರಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ತೃತೀಯ ಸ್ಥಾನ ಪಡೆದಿವೆ.
ಫಲಿತಾಂಶದಲ್ಲಿ ದಾಖಲೆಯ ಮಟ್ಟದ ಪ್ರಗತಿ ಕಂಡುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಎರಡನೇ ಪರೀಕ್ಷೆ ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಈ ಪರೀಕ್ಷೆಯ ಮೂಲಕ ಅನುತ್ತೀರ್ಣ ವಿದ್ಯಾರ್ಥಿಗಳು ಮತ್ತೊಮ್ಮೆ ಪಾಸ್ ಆಗುವ ಅವಕಾಶ ಪಡೆಯಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರು ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.



