HomeIndia NewsOperation Sindoor: ಜಸ್ಟ್ 23 ನಿಮಿಷದ ದಾಳಿಗೆ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌!

Operation Sindoor: ಜಸ್ಟ್ 23 ನಿಮಿಷದ ದಾಳಿಗೆ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌!

For Dai;y Updates Join Our whatsapp Group

Spread the love

ನವದೆಹಲಿ:- ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಭಾರತೀಯ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದಿದ್ದರು. ದಾಳಿ ವೇಳೆ ನೀನು ಹಿಂದೂನಾ? ಮುಸಲ್ಮಾನನಾ? ಎಂದು ಕೇಳಿ-ಕೇಳಿ ಹಿಂದೂಗಳ ಮೇಲೆ ಮಾತ್ರವೇ ಗುಂಡು ಹಾರಿಸಿದ್ದರು ಎನ್ನಲಾಗಿತ್ತು. ಅಲ್ಲದೆ ಪ್ರವಾಸಿಗರ ಪೈಕಿ ಹಲವು ದಂಪತಿಗಳಿದ್ದರು. ಇದರಲ್ಲಿ ಪುರುಷರ ಮೇಲೆ ಹೆಚ್ಚಾಗಿ ಫೈರಿಂಗ್‌ ಮಾಡಿ ಅವರ ಪತ್ನಿಯರನ್ನು ಏನೂ ಮಾಡದೆ ಬಿಟ್ಟಿದ್ದರು.

ಕೆಲ ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿಯೊಂದು ಕೂಡ ಪೆಹಲ್ಗಾಮ್‌ಗೆ ತೆರಳಿತ್ತು. ಪತ್ನಿಯ ಮುಂದೆಯೇ ಪತಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಪತಿಯ ಮೃತದೇಹದ ಮುಂದೆ ಕುಳಿತು ಪತ್ನಿ ಅಳುತ್ತಿದ್ದ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಮನಕಲಕುವಂತಿತ್ತು. ದಾಳಿಯಲ್ಲಿ ಪತಿಯರನ್ನು ಕೊಂದು ಪತ್ನಿಯರ ಸಿಂಧೂರ ಕಸಿದಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತವು ಆಪರೇಷನ್‌ ಸಿಂಧೂರ ಎಂಬ ದಾಳಿಗೆ ಇಳಿದಿದೆ.

ಕಾಶ್ಮೀರದ ಬೈಸರನ್‌ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್‌ಸ್ಟ್ರೈಕ್‌ ನಡೆಸಿದೆ. ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌ ಆಗಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

ಹೌದು.. ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್‌ ಉಗ್ರರ ಅಡಗುತಾಣಗಳ ಮೇಲೆ ರಫೇಲ್‌ ಇನ್ನಿತರ ಫೈಟರ್‌ಜೆಟ್‌ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿತ್ತು. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆ‌ಯ ಜೆಟ್‌ಗಳು ಸೇಫ್‌ ಆಗಿ ಮರಳಿವೆ. ಇನ್ನೂ ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ, ಜೊತೆಗೆ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್‌ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ.

ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವಿಷಯದಲ್ಲಿ ಸೇನೆಗಳಿಗೆ ಭಾರತ್ ಸರ್ಕಾರ ಪರಮಾಧಿಕಾರ ನೀಡಿದೆ. ʻMock Drill’ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!