HomeIndia NewsOperation Sindoor: ಪಾಕ್ ನ 9 ಉಗ್ರರ ನೆಲೆಗಳು ಉಡೀಸ್‌.. ಕೊನೆಗೂ ಸೇಡು ತೀರಿಸಿಕೊಂಡ...

Operation Sindoor: ಪಾಕ್ ನ 9 ಉಗ್ರರ ನೆಲೆಗಳು ಉಡೀಸ್‌.. ಕೊನೆಗೂ ಸೇಡು ತೀರಿಸಿಕೊಂಡ ಭಾರತ!

For Dai;y Updates Join Our whatsapp Group

Spread the love

ನವದೆಹಲಿ:- ಅದು ಏಪ್ರಿಲ್ 22..ಭಾರತ ಎಂದೂ ಮರೆಯದ ದಿನ. ತಮ್ಮ-ತಮ್ಮ ಕುಟುಂಬದ ಜೊತೆ ಎಂಜಾಯ್ ಮಾಡಲು ಜಮ್ಮು-ಕಾಶ್ಮೀರಕ್ಕೆ ಬಂದಿದ್ದ ಭಾರತೀಯರನ್ನು ಗುಂಡಿಕ್ಕಿ ಕೊಂದ ಗಳಿಗೆ. ನೀನು ಹಿಂದೂನಾ? ಎಂದು ಪ್ಯಾಂಟ್ ಬಿಚ್ಚಿಸಿ ಉಗ್ರರು ಭಾರತೀಯರ ಮೇಲೆ ದುಷ್ಕೃತ್ಯ ಮೆರೆದ ಕರಾಳ ದಿನ. ಈ ಉಗ್ರರ ದಾಳಿಯಿಂದ ಸುಮಾರು 28 ಭಾರತೀಯರು ಅಸುನೀಗಿದರು. ಈ ಘಟನೆಗಳು ಒಮ್ಮೆ ನೆನಪಿಸಿಕೊಂಡರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯದೇ ಇರದು. ಎಸ್ ಈ ನರಮೇಧಕ್ಕೆ ಕೊನೆಗೂ ಭಾರತ ಸೇಡು ತೀರಿಸಿಕೊಂಡಿದೆ.

ಎಸ್, ತಡರಾತ್ರಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪಹಲ್ಗಾಮ್‌ ನರಮೇಧಕ್ಕೆ ಪ್ರತೀಕಾರ ತೀರಿಸಿದೆ. ಉಗ್ರರ 9 ನೆಲೆಗಳ ಮೇಲೆ ಆಪರೇಷನ್‌ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಒಳಗಡೆ ನುಗ್ಗಿ ಏರ್‌ಸ್ಟ್ರೈಕ್‌ ಮಾಡಿ ಧ್ವಂಸ ಮಾಡಿದೆ. ಭಾರತ ಪಾಕಿಸ್ತಾನದ ಯಾವುದೇ ಮಿಲಿಟರಿ ನೆಲೆಗಳನ್ನು ಗುರಿಯಾಗಿಸದೇ ಕೇವಲ ಉಗ್ರರ ನೆಲೆಗಳನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸಿದ್ದು ವಿಶೇಷ. 9 ಉಗ್ರರ ನೆಲೆಗಳ ಪೈಕಿ ಕೆಲವು 100 ಕಿ.ಮೀ ದೂರದಲ್ಲಿ ಇದ್ದವು. ದಾಳಿಗೊಳಗಾದ ಶಿಬಿರಗಳು ಭಾರತದ ವಿರುದ್ಧದ ಹಿಂದಿನ ಅನೇಕ ದಾಳಿಗಳಿಗೆ ನೇರವಾಗಿ ಸಂಬಂಧಿಸಿವೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದಾಳಿ ಎಲ್ಲೆಲ್ಲಿ?

ಮುರಿಡ್ಕೆ: ಸಾಂಬಾ ಎದುರಿನ ಗಡಿಯಿಂದ 30 ಕಿ.ಮೀ ದೂರದಲ್ಲಿದ್ದು ಇದು ಲಷ್ಕರ್-ಎ-ತೈಬಾ ಸಂಘಟನೆ ಉಗ್ರರ ಶಿಬಿರ ನಡೆಸುತ್ತಿತ್ತು. ಮುಂಬೈ ದಾಳಿ ನಡೆಸಿದ ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗಿತ್ತು.

ಗುಲ್ಪುರ್ : ಗಡಿ ನಿಯಂತ್ರಣ ರೇಖೆ ಪೂಂಚ್-ರಾಜೌರಿಯಿಂದ 35 ಕಿ.ಮೀ ದೂರದಲ್ಲಿದೆ. ಪೂಂಚ್‌ನಲ್ಲಿ ಏಪ್ರಿಲ್ 20, 2023 ರಂದು ನಡೆದ ದಾಳಿ ಮತ್ತು ಜೂನ್ 24 ರಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಯಾತ್ರಿಕರ ಮೇಲೆ ಇಲ್ಲಿ ತರಬೇತಿ ಪಡೆದ ಉಗ್ರರು ದಾಳಿ ನಡೆಸಿದ್ದರು.

ಸವಾಯಿ: ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು ಗಡಿ ನಿಯಂತ್ರಣ ರೇಖೆಯಿಂದ 30 ಕಿ.ಮೀ ದೂರದಲ್ಲಿದೆ. ಕಳೆದ ವರ್ಷ ಅಕ್ಟೋಬರ್ 20, 24 ರಂದು ಸೋನ್‌ಮಾರ್ಗ್, ಅಕ್ಟೋಬರ್ 24 ರಂದು ಗುಲ್ಮಾರ್ಗ್ ಮತ್ತು ಏಪ್ರಿಲ್ 22 ರಂದು ಪಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರು ಇಲ್ಲಿ ತರಬೇತಿ ಪಡೆದಿದ್ದರು.

ಬಹವಾಲ್ಪುರ್: ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಬಹವಾಲ್ಪುರ್ ಮೇಲೆ ದಾಳಿ ನಡೆದಿದೆ. ಇದು ಜೈಷ್‌ ಉಗ್ರ ಸಂಘಟನೆಯ ಪ್ರಧಾನ ಕಚೇರಿಯಾಗಿತ್ತು.

ಬಿಲಾಲ್: ಉಗ್ರ ಸಂಘಟನೆ ಜೈಷ್–ಎ–ಮೊಹಮದ್ ಲಾಂಚ್‌ ಪ್ಯಾಡ್‌ ಇದಾಗಿದ್ದು ಉಗ್ರರು ಇಲ್ಲಿ ಕೊನೆಯ ಹಂತದ ತರಬೇತಿ ಪಡೆದು ಭಾರತಕ್ಕೆ ನುಗ್ಗುತ್ತಿದ್ದರು.

ಕೋಟ್ಲಿ: ಗಡಿ ನಿಯಂತ್ರಣ ರೇಖೆಯಿಂದ 15 ಕಿ.ಮೀ ದೂರದಲ್ಲಿದೆ. ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು 50 ಉಗ್ರರಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿತ್ತು

ಕೋಟ್ಲಿ: ಗಡಿ ನಿಯಂತ್ರಣ ರೇಖೆಯಿಂದ 15 ಕಿ.ಮೀ ದೂರದಲ್ಲಿದೆ. ಲಷ್ಕರ್‌ ಉಗ್ರರ ಕ್ಯಾಂಪ್‌ ಇದಾಗಿದ್ದು 50 ಉಗ್ರರಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿತ್ತು.

ಬರ್ನಾಲಾ: ಭಾರತ ಗಡಿಯಿಂದ 10 ಕಿ.ಮೀ ದೂರದಲ್ಲಿದೆ. ಇಲ್ಲೂ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಲಾಗುತ್ತಿತ್ತು.

ಸರ್ಜಲ್: ಸಾಂಬಾ ಕಟುವಾ ಬಳಿ ಅಂತಾರಾಷ್ಟ್ರೀಯ ಗಡಿಯಿಂದ 8 ಕಿಲೋಮೀಟರ್ ದೂರದಲ್ಲಿ ಜೈಶ್ ಎ ಮೊಹಮದ್ ಕ್ಯಾಂಪ್.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!