HomeBengaluru Newsಕರಾವಳಿ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಣೆ; ನಾಳೆ ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಸಾಧ್ಯತೆ?

ಕರಾವಳಿ ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​ ಘೋಷಣೆ; ನಾಳೆ ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಸಾಧ್ಯತೆ?

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿಧಾನಗತಿಯಲ್ಲಿ ಸಾಗುತ್ತಿದ್ದ ನೈಋತ್ಯ ಮುಂಗಾರು ಇದೀಗ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಶೇಷ ಮುನ್ನೆಚ್ಚರಿಕಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಶುಕ್ರವಾರ ಈ ಮೂರು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದ್ದು, ಜೂನ್ 27 ಮತ್ತು 28ರವರೆಗೂ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯ ಜೊತೆಗೆ ಬಿರುಗಾಳಿ ಸಹ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಜೂನ್ 25ರಿಂದ ಮಲೆನಾಡು ಭಾಗದಲ್ಲಿಯೂ ಮುಂಗಾರು ಚಟುವಟಿಕೆ ಮತ್ತಷ್ಟು ಬಲಗೊಳ್ಳಲಿದ್ದು, ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳಿಗೂ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.

ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಒಳನಾಡು ಭಾಗಗಳಲ್ಲಿಯೂ ಮಳೆಯ ಪ್ರಭಾವ ಕಂಡುಬರುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ನಗರದ ಕೆಲವು ಪ್ರದೇಶಗಳಲ್ಲಿ ಮಾತ್ರ ಗಾಳಿ ಸಹಿತ ತುಂತುರು ಅಥವಾ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವ ಸಾಧ್ಯತೆ ಇಲ್ಲವಾದರೂ, ನಗರದಲ್ಲಿ ತಂಪಾದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂಗಾರು ಚಟುವಟಿಕೆಗಳು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಸಕ್ರಿಯವಾಗಿರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!