ವಿಜಯಪುರ:- ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಡೋಣಿ ನದಿ ಉಕ್ಕಿ ಹರಿಯುತ್ತಿದ್ದು, ಮುಳುಗಿದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲಾಗಿದ್ದಾರೆ.
22 ವರ್ಷದ ಸಂತೋಷ ಹಡಪದ ನೀರುಪಾಲಾದ ಯುವಕ. ಅದೃಷ್ಟವಶಾತ್ ಹಿಂಬದಿ ಸವಾರ ಅಪಾಯದಿಂದ ಪಾರಾಗಿದ್ದಾನೆ. 20 ವರ್ಷದ ಮಹಾಂತೇಶ ಹೊಸಗೌಡ ಅಪಾಯದಿಂದ ಪಾರಾದ ಯುವಕ. ಇಬ್ಬರೂ ವಡವಡಗಿಯಿಂದ ತಾಳಿಕೋಟಿ ಪಟ್ಟಣಕ್ಕೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ.
ಸೇತುವೆ ಮುಳುಗಡೆಯಾಗಿದ್ದರಿಂದ ತಾಳಿಕೋಟಿ ವಿಜಯಪುರ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಯುವಕರು ಬೈಕ್‍ನಲ್ಲಿ ತೆರಳುವ ದುಸ್ಸಾಹಸ ಮಾಡಿದ್ದು ಈ ಅವಘಡಕ್ಕೆ ಕಾರಣವಾಗಿದೆ. ತಾಳಿಕೋಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



