ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ನವಿಲು ಮೃತಪಟ್ಟಿದ್ದು, ಅದನ್ನು ತಿನ್ನಲು ಹೋದ ಚಿರತೆಯೂ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕಬ್ಬಿನಕೆರೆ ಗ್ರಾಮದಲ್ಲಿ ನಡೆದಿದೆ.
ಕಬ್ಬಿನಕೆರೆ ಗ್ರಾಮದ ಕುಡಿಯುವ ನೀರಿನ ವಿದ್ಯುತ್ ಪರಿವರ್ತಕದ ಬಳಿ ನವಿಲು ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿತ್ತು. ನವಿಲನ್ನು ತಿನ್ನಲು ಬಂದ ಚಿರತೆ ಟ್ರಾನ್ಸ್ಫಾರ್ಮರ್ ಮೇಲೇರಿದ್ದು, ಅಲ್ಲಿಯೇ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದೆ.
ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ನವಿಲು ಹಾಗೂ ಚಿರತೆಯ ಮೃತದೇಹಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತು. ಈ ಘಟನೆ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.



