HomePolitics Newsಕೇಂದ್ರದಿಂದ ಶಾಶ್ವತ ಗ್ಯಾರಂಟಿ ಯೋಜನೆಗಳು

ಕೇಂದ್ರದಿಂದ ಶಾಶ್ವತ ಗ್ಯಾರಂಟಿ ಯೋಜನೆಗಳು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪ್ರಧಾನಿ ನರೇಂದ್ರ ಮೋದಿಯವರು ಅಸಾಧ್ಯವನ್ನು ಸಾಧ್ಯ ಮಾಡಿದ್ದಾರೆ.

ಜಲಜೀವನ ಮಿಷನ್ ಯೋಜನೆಯಿಂದ ದೇಶದ ಪ್ರತಿ ಮನೆಗೂ ನಳದ ನೀರು ಬರುವಂತೆ ಮಾಡಿದ್ದಾರೆ.

ನಮ್ಮ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 75 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ.

ಸೂರಿಲ್ಲದ ಬಡವರಿಗೆ ಶಾಶ್ವತ ಮನೆ ನಿರ್ಮಾಣ, ಮನೆಗಳಿಗೆ ಉಜ್ವಲ ಗ್ಯಾಸ್, ಶೌಚಾಲಯ ನಿರ್ಮಾಣ ಮಾಡುವ ಮೂಲಕ ಶಾಶ್ವತ ಗ್ಯಾರಂಟಿಗಳನ್ನು ನೀಡಿದ್ದಾರೆ. ಮೋದಿಯವರು ಮುಂದಿನ ಐದು ವರ್ಷ ಮತ್ತೆ ಪ್ರಧಾನಿಯಾದರೆ ಬಡತನ ಮುಕ್ತ ಭಾರತ ಮಾಡುತ್ತಾರೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ, ಗೊಜನೂರು ಗ್ರಾಮಗಳಲ್ಲಿ ರೋಡ್‌ಶೋ ಮೂಲಕ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದರು.

ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ನಾವು ಒಂದೇ ತಿಂಗಳಲ್ಲಿ 17 ಲಕ್ಷ ರೈತರಿಗೆ ನೇರವಾಗಿ ಅವರ ಖಾತೆಗೆ ಪರಿಹಾರದ ಮೊತ್ತ ಜಮೆ ಮಾಡಿದ್ದೆವು. ಕಾಂಗ್ರೆಸ್‌ನವರು ಹತ್ತು ತಿಂಗಳು ಕಳೆದಿದ್ದರೂ, ಸರಿಯಾಗಿ ಪರಿಹಾರ ನೀಡಿಲ್ಲ. ರೈತರಿಗೆ ಪರಿಹಾರವಾಗಿ 2 ಸಾವಿರ ರೂಪಾಯಿ ಭಿಕ್ಷೆ ನೀಡಿದಂತೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿ ದೇಶಾದ್ಯಂತ ಶೇ.90ರಷ್ಟು ಜನರ ಮನಸ್ಸಿನಲ್ಲಿ ಮೋದಿ ಇದ್ದಾರೆ. ಅವರ ಋಣ ತೀರಿಸಲು ಎಲ್ಲರೂ ಬಿಜೆಪಿಗೆ ಆಶೀರ್ವಾದ ಮಾಡಿದರೆ, ದೇಶದಲ್ಲಿ ಮತ್ತೆ ಬಿಜೆಪಿಯ ಕಮಲದ ಹೂ ಅರಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಸುನಿಲ ಮಹಾಂತಶೆಟ್ಟರ, ಪ್ರವೀಣ ಬಾಳಿಕಾಯಿ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!