ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ–ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿತವಾದ ಶ್ರೀಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಇಂದು ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಮಠದಲ್ಲಿ ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿ, ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಶ್ರೀಗಳು ಅವರಿಗೆ ತಿಲಕವಿಟ್ಟು ಆಶೀರ್ವದಿಸಿದರು.
ಉದ್ಘಾಟನೆ ನಂತರ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗಳ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿ, ಮಂದಿರದ ವೀಕ್ಷಣೆ ನಡೆಸಿದರು. ಈ ವೇಳೆ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಪ್ರಧಾನಿಗೆ ಸಾಥ್ ನೀಡಿದರು.



