HomeKarnataka NewsPOCSO Case: ವಚನಾನಂದ ಶ್ರೀಗೆ ಹೈಕೋರ್ಟ್ʼನಿಂದ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು

POCSO Case: ವಚನಾನಂದ ಶ್ರೀಗೆ ಹೈಕೋರ್ಟ್ʼನಿಂದ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು

For Dai;y Updates Join Our whatsapp Group

Spread the love

ಬೆಂಗಳೂರು/ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ವಚನಾನಂದ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಹಿನ್ನಡೆ ನೀಡಿದ್ದು, ಈ ಹಿಂದೆ ಮಂಜೂರಾಗಿದ್ದ ನಿರೀಕ್ಷಣಾ (ಮುಂಗಡ) ಜಾಮೀನನ್ನು ರದ್ದುಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿರುವ ಕ್ರಮದ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಬಳಿಕ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಆದಾಗ್ಯೂ, ವಚನಾನಂದ ಸ್ವಾಮೀಜಿಗೆ ತಾತ್ಕಾಲಿಕ ನಿರಾಳತೆ ನೀಡಿರುವ ನ್ಯಾಯಾಲಯ, ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದೆ. ಅಲ್ಲಿಯವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಯಲಿದ್ದು, ತಕ್ಷಣದ ಬಂಧನದಿಂದ ತಾತ್ಕಾಲಿಕ ರಕ್ಷಣೆ ದೊರೆತಂತಾಗಿದೆ.

ಪ್ರಕರಣದ ವಿಚಾರಣೆ ವೇಳೆ, ಸ್ವಾಮೀಜಿ ವಿರುದ್ಧ ಗಂಭೀರ ಸ್ವರೂಪದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದನ್ನು ನ್ಯಾಯಾಲಯ ಗಮನಿಸಿದೆ. ಇಂತಹ ಗಂಭೀರ ಆರೋಪಗಳಿರುವ ಸಂದರ್ಭದಲ್ಲಿ ಪ್ರಕರಣ ದಾಖಲಾಗುವ ಮೊದಲುವೇ ನಿರೀಕ್ಷಣಾ ಜಾಮೀನು ನೀಡಿರುವ ವಿಧಾನ ಕಾನೂನುಬದ್ಧವಾಗಿ ಪ್ರಶ್ನಾರ್ಹವಾಗಿದೆ ಎಂಬ ಅಭಿಪ್ರಾಯವನ್ನು ಹೈಕೋರ್ಟ್ ವ್ಯಕ್ತಪಡಿಸಿದೆ.

ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ನಿರೀಕ್ಷಣಾ ಜಾಮೀನು ನೀಡಿದ ಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿ ವಚನಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿತ್ತು. ಬಳಿಕ ನಡೆದ ಮುಂದಿನ ವಿಚಾರಣೆಯಲ್ಲಿ ಜಾಮೀನು ಆದೇಶವನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದೆ.

ಇದೀಗ ವಚನಾನಂದ ಸ್ವಾಮೀಜಿ ನಿಯಮಿತ ಜಾಮೀನು ಕೋರಿ ಸಂಬಂಧಪಟ್ಟ ನ್ಯಾಯಾಲಯದ ಮೊರೆ ಹೋಗುವ ಅವಕಾಶ ಹೊಂದಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳತ್ತ ಪ್ರಕರಣದ ಚಿತ್ತ ನೆಟ್ಟಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!