ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ರಾಬರಿ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಹಬಾಜ್ ಖಾನ್ ಹಾಗೂ ಮುಬಾರಕ್ ಬಂಧಿತ ಆರೋಪಿಗಳಾಗಿದ್ದು,
ಬಂಧಿತರಿಂದ 2.15 ಲಕ್ಷ ಬೆಲೆಬಾಳುವ 11 ಮೊಬೈಲ್ ಹಾಗೂ ದ್ವಿ ಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಆರೋಪಿಗಳ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



