ವಿಜಯಸಾಕ್ಷಿ ಸುದ್ದಿ, ಗದಗ: ಸ್ಥಳೀಯ ದೇವರಾಜ ಅರಸು ವಸತಿ ನಿಲಯದಲ್ಲಿ ಸೆ. 7ರಂದು ಸಂಜೆ 4.30 ಗಂಟೆಗೆ ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಹಾಗೂ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ ಉಪಸ್ಥಿತರಿರುವರು.
ಸೆ.20ರಂದು ಜರುಗಲಿರುವ ಗದಗ ತಾಲೂಕಾ ಕುರುಬರ ಸಂಘದ ರಜತ ಮಹೋತ್ಸವ ಹಾಗೂ ಫಕೀರಪ್ಪ ಹೆಬಸೂರರ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ರೂಪುರೇಷೆ, ಸ್ಥಳ ನಿಗದಿ ಕುರಿತು ಚರ್ಚಿಸಲಾಗುವುದು ಮತ್ತು ಸಮಾರಂಭಕ್ಕೆ ಗಣ್ಯಮಾನ್ಯರನ್ನು ಆಮಂತ್ರಿಸುವ ಕುರಿತು, ಸಮಾರಂಭದ ಸವಿನೆನಪಿಗಾಗಿ ಹೊರತರಲಿರುವ ಸ್ಮರಣ ಸಂಚಿಕೆಯ ಮುದ್ರಣ, ಜಾಹೀರಾತು ಮುಂತಾದ ವಿಷಯಗಳ ಕುರಿತು ಚರ್ಚಿಸಲಾಗುವುದು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಾಲೂಕಿನಾದ್ಯಂತ ಸಮಾಜ ಸಂಘಟನೆ ಹಾಗೂ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಗಳನ್ನು ನಡೆಸುವ ಬಗ್ಗೆ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ, ಸಮಾಜ ಭಾಂದವರಿಗೆ ಊಟದ ವ್ಯವಸ್ಥೆ ಕುರಿತು ಚರ್ಚೆ ಹಾಗೂ ಕಾರ್ಯಕ್ರಮಕ್ಕೆ ತಗಲುವ ಹಣಕಾಸು ಸಂಗ್ರಹ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಸ್ವಾಗತ ಸಮಿತಿಯ ಕಾರ್ಯದರ್ಶಿ ಶಶಿಧರ ರೊಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



