ತುಮಕೂರು:- ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬ್ರಿಡ್ಜ್ ಬಳಿ ಖಾಸಗಿ ಬಸ್ ಪಲ್ಟಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.
ಬಸ್‌ನಲ್ಲಿ ಒಟ್ಟು 29 ಜನ ಪ್ರಯಾಣಿಸುತ್ತಿದ್ದು, ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಶಿರಾ, ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಿಕ್ಕನಹಳ್ಳಿ ಬಳಿ ನಿರ್ಮಾಣವಾಗಿರುವ ನೂತನ ಬ್ರಿಡ್ಜ್ ಮೇಲೆ ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



