ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯದ ಮೂರು ಕ್ಷೇತ್ರ ಸೇರಿದಂತೆ ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಭರ್ಜರಿ ಗೆಲುವನ್ನು ಸಾಧಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಿದೆ ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಎಸ್. ಪಾಟೀಲ ಹೇಳಿದರು.
ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ, ರಾಜ್ಯದ ಮೂರು ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ನಮ್ಮ ಅಭ್ಯರ್ಥಿಗಳಿಗೆ ಗೆಲುವನ್ನು ತಂದುಕೊಟ್ಟಿದ್ದಾರೆ. ಬಿಜೆಪಿಯವರು ಸರಕಾರದ ಬಗ್ಗೆ ಅಪಪ್ರಚಾರವನ್ನು ಮಾಡುವ ಮೂಲಕ ಗೆಲ್ಲಲು ಮುಂದಾಗಿದ್ದರು. ಆದರೆ ಮೂರು ಕ್ಷೇತ್ರಗಳ ಮತದಾರರು ಬಿಜೆಪಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಜಾರ್ಖAಡ್‌ನಲ್ಲಿಯೂ ಕಾಂಗ್ರೆಸ್ ಸರಕಾರ ಬರಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದ ಅವರು, ವಯನಾಡಿನಲ್ಲಿ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ ಗೆಲ್ಲುವ ಮೂಲಕ ದೇಶದ ಜನರಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ. ಮುಖ್ಯವಾಗಿ ರಾಜ್ಯ ಕಾಂಗ್ರೆಸ್ ಸರಕಾರ ನಾಡಿನ ಜನ ಮೆಚ್ಚುವ ರಿತಿಯಲ್ಲಿ ತನ್ನ ಆಡಳಿತವನ್ನು ನಡೆಸಲಿದೆ ಎಂದರು.
ವಿ.ಆರ್. ಗುಡಿಸಾಗರ, ವಿ.ಬಿ. ಸೋಮನಕಟ್ಟಿಮಠ, ಬಸವರಾಜ ನವಲಗುಂದ, ಯೂಸುಪ್ ಇಟಗಿ, ಅಂದಪ್ಪ ಬಿಚ್ಚೂರ, ಸಂಗು ನವಲಗುಂದ, ಅಪ್ಪು ಗಿರಡ್ಡಿ, ಆನಂದ ಚಂಗಳಿ, ಶಿವು ಹುಲ್ಲೂರ, ಮೌನೇಶ ಹಾದಿಮನಿ, ದುರ್ಗಪ್ಪ ಹಿರೇಮನಿ, ಕುಮಾರ ಗೌಡನ್ನವರ, ಮಲಿಕ ಯಲಿಗಾರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.



