HomeGadag Newsನೀಟ್ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ

ನೀಟ್ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಷ್ಟ್ರೀಯ ಪರೀಕ್ಷಾ ಏಜನ್ಸಿ ನವದೆಹಲಿ ವತಿಯಿಂದ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನೀಟ್ ( ಎನ್‌ಇಇಟಿ) ಪರೀಕ್ಷೆಗಳು ಮೇ 5ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.20ರವರೆಗೆ ನಡೆಯಲಿದೆ.

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಮೇ 5ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ, ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ ಅಂಗಡಿ, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಏಜನ್ಸಿ ನವದೆಹಲಿಯು ಪ್ರತಿಬಂಧಿಸಿದ ಯಾವುದೇ ವಸ್ತುಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಡಿ ತೆಗೆದುಕೊಂಡು ಹೋಗಲು ನಿರ್ಬಂಧವಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ವೈಶಾಲಿ ಎಂ.ಎಲ್ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ನೀಟ್ ಪರೀಕ್ಷಾ ಕೇಂದ್ರಗಳು

ಗದಗ ಬೆಟಗೇರಿಯ ಸೇಂಟ್ ಜಾನ್ ಹೈಸ್ಕೂಲ್, ನಗರದ ಲಯನ್ಸ್ ಎಜ್ಯುಕೇಶನ್ ಸೊಸೈಟೀಸ್ ಜಿಡಿಶಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಮಹಾವೀರ್ ಜೈನ್ ಎಜ್ಯುಕೇಶನ್ ಸೊಸೈಟಿ ಶ್ರೀ ಪಾರ್ಶ್ವನಾಥ ಇಂಗ್ಲೀಷ್ ಮೀಡಿಯಂ ಸ್ಕೂಲ್, ಎ.ಎಸ್.ಎಸ್. ಡಿ.ಎಸ್ ಕುರ್ತಕೋಟಿ ಮೆಮೋರಿಯಲ್ ಪಿ.ಯು ಕಾಲೇಜ್ ಆಫ್ ಕಾಮರ್ಸ್, ಬಾಲ ವಿನಾಯಕ ವಿದ್ಯಾನಿಕೇತನ, ಎಸ್.ಟಿ.ಎಸ್.ಕೆ.ಕೆ.ಎಸ್. ಪಾಲಿಟೆಕ್ನಿಕ್ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜ್ ಕ್ಯಾಂಪಸ್, ಕೆ.ಎಲ್.ಇ. ಸೊಸೈಟೀಸ್ ಸ್ಕೂಲ್, ಜೆ.ಟಿ ಕಾಲೇಜ್ ಕ್ಯಾಂಪಸ್.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!