ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ಸನ್ನಾಹಗಳು ಜೋರಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಾತಾವರಣ ತೀವ್ರಗೊಂಡಿದ್ದು, ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಈ ನಡುವೆ ಟಿಎಂಸಿ ಹಿರಿಯ ನಾಯಕ ಕುನಾಲ್ ಘೋಷ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕುನಾಲ್ ಘೋಷ್, ರಾಹುಲ್ ಗಾಂಧಿ ಅವರ ನಾಯಕತ್ವ ಸಾಮರ್ಥ್ಯವನ್ನು ಪ್ರಶ್ನಿಸಿದರು. ಮಹಾರಾಷ್ಟ್ರ, ದೆಹಲಿ, ಹರಿಯಾಣ ಮತ್ತು ಬಿಹಾರ ಸೇರಿದಂತೆ ಪ್ರಮುಖ ರಾಜ್ಯಗಳಲ್ಲಿ ಬಿಜೆಪಿಯ ವಿಸ್ತರಣೆಯನ್ನು ತಡೆಯುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ತಮ್ಮ ರಾಜಕೀಯ ಜವಾಬ್ದಾರಿಯಿಂದ ಹಿಂದೆ ಸರಿದ ರಾಹುಲ್ ಗಾಂಧಿ ಈಗ ಪಶ್ಚಿಮ ಬಂಗಾಳಕ್ಕೆ ಬಂದು ಬಿಜೆಪಿಗೆ ಅನುಕೂಲವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಘೋಷ್ ಆರೋಪಿಸಿದರು.
ಇದಲ್ಲದೆ, ಟಿಎಂಸಿ ಬಲವಾಗಿರುವ ಕ್ಷೇತ್ರಗಳಿಗೆ ರಾಹುಲ್ ಗಾಂಧಿ ಭೇಟಿ ನೀಡುತ್ತಿರುವುದರ ಹಿಂದೆ ಸಂಚು ಇದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳದಲ್ಲಿ ಅವರ ಪ್ರವೇಶವು ವಿರೋಧ ಪಕ್ಷಗಳ ಮತಗಳನ್ನು ವಿಭಜಿಸಲು ಕಾರಣವಾಗುತ್ತಿದ್ದು, ಇದರಿಂದ ಬಿಜೆಪಿಗೆ ನೇರ ಲಾಭವಾಗುತ್ತಿದೆ ಎಂದು ಘೋಷ್ ಆರೋಪಿಸಿದರು.



