ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಿರುವ ಹಿನ್ನೆಲೆ, ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಜಗದೀಶ್ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಮೌಖಿಕವಾಗಿ ಆದೇಶಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಡಿಸಿ ತಿಳಿಸಿದ್ದಾರೆ.



