HomeKarnataka NewsRain News: ಇಂದಿನಿಂದ ಡಿ.28 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ!

Rain News: ಇಂದಿನಿಂದ ಡಿ.28 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ!

For Dai;y Updates Join Our whatsapp Group

Spread the love

ಬೆಂಗಳೂರು:- ಇಂದಿನಿಂದ ಡಿ.28 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಇಂದು ಬಿಸಿಲಿರಲಿದ್ದು ಡಿ.26ರ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!