HomeKarnataka Newsಮಳೆ ಆರ್ಭಟ: ನಾಳೆಯಿಂದ ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಮಳೆ ಆರ್ಭಟ: ನಾಳೆಯಿಂದ ಎರಡು ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

For Dai;y Updates Join Our whatsapp Group

Spread the love

ಕೊಡಗು:- ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಗುರುವಾರ, ಶುಕ್ರವಾರ ಅಂದ್ರೆ ನಾಳೆ, ನಾಡಿದ್ದು ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ 2 ದಿನ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಜಿಲ್ಲೆಗೆ ಆಗಮಿಸಿರುವ ಎನ್​ಡಿಆರ್​ಎಫ್​ ಯಾವುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರೋದಾಗಿ ಹೇಳಿದೆ.

ಜಿಲ್ಲೆಯಲ್ಲಿ ಮಳೆ ಅಬ್ಬರ ಕೊಂಚ ಕಡಿಮೆ ಆದರೂ ಅಲ್ಲಲ್ಲಿ ಅವಾಂತರಗಳು ಮುಂದುವರೆದಿವೆ. ಬಹಳಷ್ಟು ಗ್ರಾಮಗಳಲ್ಲಿ ಇನ್ನೂ ನದಿಗಳು ಅಪಾಯ ಮಟ್ಟದಲ್ಲೇ ಹರಿಯುತ್ತಿವೆ. ಹಾಗಾಗಿ ಪ್ರವಾಹದ ಆತಂಕದಿಂದ ಇನ್ನೂ ಜನರು ದೂರವಾಗಿಲ್ಲ. ಹೀಗಾಗಿ ಜಿಲ್ಲಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!