HomeKarnataka Newsಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ: ಹವಾಮಾನ ಇಲಾಖೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ: ಹವಾಮಾನ ಇಲಾಖೆ

For Dai;y Updates Join Our whatsapp Group

Spread the love

ಬೆಂಗಳೂರು:- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಕಾಲ ಆರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬರಲಿದೆ. ನಂತರ ಕೆಲವು ದಿನ ತಣ್ಣಗಾಗಿರುವ ಮಳೆರಾಯ ಡಿಸೆಂಬರ್ 17ರಿಂದ ಮತ್ತೆ ಅಬ್ಬರಿಸಲು ಶುರು ಮಾಡಲಿದ್ದಾನೆ ಎಂದು ಐಎಂಡಿ ಅಂದಾಜಿಸಿದೆ.

ಅಂದು ಕೂಡ ಉತ್ತರ ಒಳನಾಡಿಗೆ ಮಳೆ ಮುನ್ಸೂಚನೆ ಇಲ್ಲ. ಬದಲಾಗಿ ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುವ ಲಕ್ಷಣಗಳು ಇವೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕಮಗಳೂರು,

ಮೈಸೂರು, ರಾಮನಗರ ಈ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆ ಆಗಲಿದೆ. ಒಂದೆರಡು ಕಡೆಗಳಲ್ಲಿ ಸಾಧಾರಣಕ್ಕಿಂತ ಅತ್ಯಧಿಕ ಪ್ರಮಾಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾನ ಹೆಚ್ಚಿರಲಿದೆ ಎಂದು ವರದಿ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!