HomeKarnataka Newsಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕು: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ!

ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕು: ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳ!

For Dai;y Updates Join Our whatsapp Group

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ.

ಮಳೆಯ ಜೊತೆಗೆ ಚಳಿ ವಾತಾವರಣವೂ ಹೆಚ್ಚಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ.

ಹಾರಂಗಿ ಜಲಾಶಯಕ್ಕೆ ಇಂದು ಸುಮಾರು 1,470 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ನೀರಿನ ಮಟ್ಟವೂ ನಿಧಾನವಾಗಿ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿ ಆಗಿದ್ದು, ಪ್ರಸ್ತುತ ಸುಮಾರು 2,832 ಅಡಿ ನೀರು ಸಂಗ್ರಹವಾಗಿದೆ.

ಜಲಾಶಯದಿಂದ ಸುಮಾರು 180 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಒಟ್ಟು ನೀರು ಸಂಗ್ರಹ ಸಾಮರ್ಥ್ಯ 8.5 ಟಿಎಂಸಿ ಆಗಿದೆ. ಪ್ರಸ್ತುತ ಸುಮಾರು 2.7 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಭತ್ತ, ಕಾಫಿ ಸೇರಿದಂತೆ ಪ್ರಮುಖ ಬೆಳೆಗಳ ಕೃಷಿಯಲ್ಲಿ ರೈತರು ಉತ್ಸಾಹದಿಂದ ತೊಡಗಿಕೊಂಡಿದ್ದಾರೆ.

ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟವೂ ನಿಧಾನವಾಗಿ ಏರಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾದರೆ ಹಾರಂಗಿ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img