HomeKarnataka Newsಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಕೇಸ್: ಪೋಷಕರಿಗೆ ಪರಿಹಾರದ ಚೆಕ್ ವಿತರಿಸಿದ DCM...

ಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಕೇಸ್: ಪೋಷಕರಿಗೆ ಪರಿಹಾರದ ಚೆಕ್ ವಿತರಿಸಿದ DCM ಡಿಕೆಶಿ!

For Dai;y Updates Join Our whatsapp Group

Spread the love

ರಾಮನಗರ:– ಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಮೇಲಿನ ಅತ್ಯಾಚಾರ, ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೃತ ಬಾಲಕಿ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ ₹50,000 ಪರಿಹಾರ ಚೆಕ್ ವಿತರಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

“ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ, ನಿಷ್ಠುರವಾಗಿ ತನಿಖೆ ನಡೆಯಲಿದೆ” ಎಂದರು. “ಯಾರ‌ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ” ಎಂದರು.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನಾವು ನ್ಯಾಯ ಒದಗಿಸುತ್ತೇವೆ ” ಎಂದರು. “ಬಾಲಕಿಯು ಹಾಸ್ಟೆಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿತ್ತು. ರಜೆಗೆಂದು ಊರಿಗೆ ಬಂದ ಸಂದರ್ಭದಲ್ಲಿ ಈ ಅನಾಹುತ ಘಟನೆ ನಡೆದಿದೆ. ಮಾತುಬಾರದ, ಕಿವಿ ಕೇಳದಿದ್ದರೂ ಚುರುಕಾಗಿದ್ದ ಬಾಲಕಿ ಎಂದು ಎಲ್ಲರೂ ಹೇಳುತ್ತಿದ್ದಾರೆ” ಎಂದರು.

ಘಟನೆ ನಡೆದಿರುವ ಈ ಊರಿನಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಬೀದಿ ದೀಪಗಳ ವ್ಯವಸ್ಥೆಯಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಈಗ ಈ ಪ್ರಕರಣದ ಜತೆಗೆ ಬೇರೆ ವಿಚಾರಗಳನ್ನು ಬೆರೆಸಲು ಹೋಗುವುದಿಲ್ಲ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು” ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!