HomePolitics Newsರೇಪ್‌ ಕೇಸ್‌: ನಾಳೆ ಪ್ರಜ್ವಲ್ ರೇವಣ್ಣಗೆ ಮಹತ್ವದ ದಿನ, ಜಡ್ಜ್ ತೀರ್ಪಿನ ಮೇಲೆ ರಾಜಕಾರಣಿ ಭವಿಷ್ಯ!

ರೇಪ್‌ ಕೇಸ್‌: ನಾಳೆ ಪ್ರಜ್ವಲ್ ರೇವಣ್ಣಗೆ ಮಹತ್ವದ ದಿನ, ಜಡ್ಜ್ ತೀರ್ಪಿನ ಮೇಲೆ ರಾಜಕಾರಣಿ ಭವಿಷ್ಯ!

For Dai;y Updates Join Our whatsapp Group

Spread the love

ಬೆಂಗಳೂರು:- ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಾಳೆ ಮಹತ್ವದ ದಿನವಾಗಲಿದ್ದು, ಕೋರ್ಟ್ ನಿಂದ ಮಹತ್ವದ ತೀರ್ಪು ಹೊರ ಬೀಳಲಿದೆ.

ಕೆ.ಆರ್.ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಭವಿಷ್ಯ ಬುಧವಾರ ಅಂದ್ರೆ ನಾಳೆ ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆಯ ನಂತರ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಲಿದೆ. ಈ ತೀರ್ಪು ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ಮೇಲೂ ಪ್ರಭಾವ ಬೀರಲಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ನಾಳೆ ಗೊತ್ತಾಗಲಿದೆ.

ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಬಹಳ ಮಹತ್ವದ್ದಾಗಿರಲಿದೆ. ಈಗಾಗಲೇ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‍ನಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ಕ್ಕೆ ಆದೇಶ ಕಾಯ್ದಿರಿಸಿತ್ತು. ಕೆಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್‍ ದಾಖಲಾಗಿತ್ತು. ಸದ್ಯಕ್ಕೆ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!