HomeKarnataka Newsಇತ್ತೀಚೆಗೆ ಮುಂಬಡ್ತಿ ಪಡೆದಿದ್ದ IPS ಅಧಿಕಾರಿ ಡಿ ರೂಪಾ, IAS ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ!

ಇತ್ತೀಚೆಗೆ ಮುಂಬಡ್ತಿ ಪಡೆದಿದ್ದ IPS ಅಧಿಕಾರಿ ಡಿ ರೂಪಾ, IAS ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ!

For Dai;y Updates Join Our whatsapp Group

Spread the love

ಬೆಂಗಳೂರು:– IPS ಅಧಿಕಾರಿ ಡಿ ರೂಪಾ ಹಾಗೂ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರಿಗೆ ಎಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿದ್ದ ಕರ್ನಾಟಕ ಸರ್ಕಾರ ಇದೀಗ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರೋಹಿಣಿ ಸಿಂಧೂರಿ ವರ್ಗಾವಣೆ:

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಇತರ ಕೆಲವು ಮಂದಿ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕೃಷಿ ಇಲಾಖೆಯ (ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ) ಕಾರ್ಯದರ್ಶಿ ಹುದ್ದೆಯಿಂದ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಐಎಎಸ್​ ಅಧಿಕಾರಿ ಅಕ್ರಂ ಪಾಷಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಎಸ್​ಆರ್​ಟಿಸಿ ಎಂಡಿ ಆಗಿ ನೇಮಕ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!