ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ವಿಟ್ನೆಸ್ ಆಗಿರುವ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ನಾಲ್ಕು ದಿನಗಳ ಬಳಿಕ ಅಂತ್ಯಗೊಂಡಿದೆ.
59ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರದೋಷ್ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಿದ್ದು, ದರ್ಶನ್ ಹಾಗೂ ಗ್ಯಾಂಗ್ ವಿರುದ್ಧದ ಪ್ರಮುಖ ವಿಚಾರಗಳನ್ನು ನ್ಯಾಯಾಲಯದ ಮುಂದೆ ವಿವರಿಸಿದ್ದಾರೆ. ಪ್ರದೋಷ್ ಅವರ ಹೇಳಿಕೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ದಾಖಲಿಸಿಕೊಂಡಿದೆ.
ಪ್ರಾಸಿಕ್ಯೂಷನ್ ಪರವಾಗಿ ಪ್ರದೋಷ್ ಅವರ ಹೇಳಿಕೆ ದಾಖಲಾಗಿದ್ದು, ಇದೀಗ ಮಂಗಳವಾರ ಡಾಕ್ಯುಮೆಂಟ್ ಮಾರ್ಕಿಂಗ್ ಪ್ರಕ್ರಿಯೆ ನಡೆಯಲಿದೆ. ಇದೇ ವೇಳೆ, ಪ್ರದೋಷ್ ಅವರನ್ನು ಕ್ರಾಸ್ ಎಕ್ಸಾಮಿನೇಷನ್‌ಗೆ ಒಳಪಡಿಸುವಂತೆ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.



