HomeGadag Newsಪರೀಕ್ಷಾ ಕೇಂದ್ರ ಬದಲಾವಣೆಗೆ ಒತ್ತಾಯಿಸಿ ಮನವಿ

ಪರೀಕ್ಷಾ ಕೇಂದ್ರ ಬದಲಾವಣೆಗೆ ಒತ್ತಾಯಿಸಿ ಮನವಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಪರೀಕ್ಷಾ ಕೇಂದ್ರ ಬದಲಾವಣೆಗೆ ಒತ್ತಾಯಿಸಿ ಡಾ. ಪಿ.ಜಿ.ಎ.ಎಸ್. ಸಮಿತಿಯ ಶ್ರೀ ಕೆ.ಕೆ.ಪಿ.ಪಿ.ಜಿ. ಸಂಗೀತ ಶಾಲೆಯ ಸಿಬ್ಬಂದಿಗಳು ವಿ.ಪ ಸದಸ್ಯ ಎಸ್.ವಿ. ಸಂಕನೂರ ಅವರಿಗೆ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿಗಳಾದ ಪೂಜ್ಯ ಡಾ. ಕಲ್ಲಯ್ಯಜ್ಜನವರು ನೀಡಿದ ಮನವಿ ಪತ್ರವನ್ನು ಅರ್ಪಿಸಿದರು.

ಮನವಿ ಪತ್ರದಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ಲ ಸಂಗೀತ ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದವರು ರಾಜ್ಯ ಮಟ್ಟದ ವಿಶೇಷ ಸಂಗೀತ ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳನ್ನು
ಈ ಹಿಂದೆ ಬೆಂಗಳೂರಿನ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿನಡೆಸುತ್ತಿದ್ದರು. ಪರೀಕ್ಷೆಗಳನ್ನು ನಡೆಸಲು ಆಯಾ ಜಿಲ್ಲಾ ಡಯಟ್ ಕೇಂದ್ರಗಳಿಗೆ ಒಪ್ಪಿಸಿದ್ದರು.

ಈಗ ದಿಢೀರನೆ ಡಾ. ಗಂಗೂಬಾಯಿ ಹಾನಗಲ್ಲ ವಿಶ್ವವಿದ್ಯಾಲಯದವರು ಈ ಬಾರಿಯ ಸಂಗೀತ ಪರೀಕ್ಷೆಗಳಿಗೆ ಲಿಖಿತ ಹಾಗೂ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳನ್ನು ಗದಗ ಜಿಲ್ಲೆಯನ್ನು ಬಿಟ್ಟು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಸಲಿದ್ದಾರೆ. ಶ್ರೀಮಠದ ಅಂಧರು, ಅಂಗವಿಕಲರು, ದೀನದಲಿತರು ಹಾಗೂ ಇತರ ಬಡ ಮಕ್ಕಳಿಗೂ ಇದರಿಂದ ತುಂಬಾ ಅನಾನುಕೂಲವಾಗುತ್ತದೆ.

ಆದ್ದರಿಂದ, ಈ ಹಿಂದೆ ನಡೆಸುತ್ತಾ ಬಂದಿರುವ ಗದಗ ಜಿಲ್ಲಾ ಕೇಂದ್ರದಲ್ಲಿಯೇ ಸಂಗೀತ/ತಾಳವಾದ್ಯ ಪರೀಕ್ಷೆಗಳನ್ನು ನಡೆಸಲು ಅನುಮತಿ ಕೊಡಿಸಲು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img