HomeKoppalಮನೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿಯ ರಕ್ಷಣೆ

ಮನೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿಯ ರಕ್ಷಣೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ಧಿ, ಕೊಪ್ಪಳ: ಗಂಗಾವತಿ ತಾಲೂಕಿನಲ್ಲಿ ಕಳೆದ 3 ದಿನಗಳಿಂದ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಪರಿಣಾಮ ಮನೆಯೊಂದು ಕುಸಿದು ಬಿದ್ದು ವ್ಯಕ್ತಿಯೊಬ್ಬ ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ತಾಲೂಕಿನ ಢಣಾಪುರ ಗ್ರಾಮದಲ್ಲಿ ಆ.5ರ ಶನಿವಾರ ಬೆಳಗಿನ ಜಾವ ನಡೆದಿದೆ.

ಢಣಾಪುರ ಗ್ರಾಮದ ಪ್ರಕಾಶ್ ಎಂಬವರು ಮನೆಯ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು ಗ್ರಾಮಸ್ಥರು ಸಕಾಲಕ್ಕೆ ಸ್ಪಂದಿಸಿ ಪ್ರಕಾಶ್ ನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಢಣಾಪುರದ ಹಳೆಯ ಮಣ್ಣಿನ ಮನೆಯಲ್ಲಿ ಮಲಗಿದ್ದ ಪ್ರಕಾಶ್ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಮನೆ ಬಿದ್ದ ತಕ್ಷಣ ಪ್ರಕಾಶ ಚೀರಿಕೊಂಡಿದ್ದರಿಂದ ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಆಗಮಿಸಿ ಮಣ್ಣನ್ನು ತೆರೆವುಗೊಳಿಸಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img