HomeHaveriನಿಮ್ಮೆಲ್ಲರ ಬೆಂಬಲಕ್ಕೆ ಚಿರಋಣಿ : ಬಸವರಾಜ ಬೊಮ್ಮಾಯಿ

ನಿಮ್ಮೆಲ್ಲರ ಬೆಂಬಲಕ್ಕೆ ಚಿರಋಣಿ : ಬಸವರಾಜ ಬೊಮ್ಮಾಯಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಹಾವೇರಿ : ಕಾಂಗ್ರೆಸ್‌ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದಲ್ಲಿ ನಡೆದ ಬೃಹತ್ ರೋಡ್ ಶೋನಲ್ಲಿ ಪಾಲ್ಗೊಂಡು ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಸಂಸದರು ಮಾತನಾಡಿದರು.

ನಿಮ್ಮ ಅಭೂತಪೂರ್ವ ಬೆಂಬಲಕ್ಕೆ ನಾನು ಚಿರಋಣಿಯಾಗಿದ್ದೇನೆ. ಮಾಜಿ ಮುಖ್ಯಮಂತ್ರಿ ಹಾಗೂ ನಮ್ಮೆಲ್ಲರ ನೆಚ್ಚಿನ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ನನ್ನ ಚುನಾವಣೆಗೆ ನಾಲ್ಕು ಬಾರಿ ಶಿಗ್ಗಾವಿಗೆ ಬಂದಿದ್ದಾರೆ. ಅವರು ಶಿಗ್ಗಾವಿಗೆ ಕಾಲಿಟ್ಟಾಗಲೆಲ್ಲಾ ಬಿಜೆಪಿ ಇಲ್ಲಿ ಗೆದ್ದಿದೆ ಎಂದರು.

ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ಬಿಜೆಪಿಯ ಬಲ ಹೆಚ್ಚಿಸಿದ್ದಾರೆ. ಅವರ ಶ್ರಮದಿಂದ ಶಿಗ್ಗಾವಿಯಲ್ಲಿ ಐಟಿಐ, ಮೆಡಿಕಲ್ ಕಾಲೇಜು, ಆಸ್ಪತ್ರೆ ಬಂದಿದೆ. ಕ್ಷೇತ್ರದಲ್ಲಿ ಗಾರ್ಮೆಂಟ್ ಕಾರ್ಖಾನೆಯಿಂದ ಸುಮಾರು 5 ಸಾವಿರ ಹೆಣ್ಣುಮಕ್ಕಳು ಉದ್ಯೋಗ ಪಡೆದಿದ್ದಾರೆ. ಕಾಂಗ್ರೆಸ್‌ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಬೇಕು. ಅದಕ್ಕಾಗಿ ಭರತ್ ಬೊಮ್ಮಾಯಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್, ಮುರುಗೇಶ ನಿರಾಣಿ, ಬೈರತಿ ಬಸವರಾಜ್, ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!