HomeBengaluru Newsಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್!

ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ: ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್!

For Dai;y Updates Join Our whatsapp Group

Spread the love

ಬೆಂಗಳೂರು:- ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಹಿನ್ನೆಲೆ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ದರ್ಶನ್​ ಮಾತ್ರವಲ್ಲದೇ, ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿನ ಎಲ್ಲ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನ್ಯಾಯಾಲಯದಿಂದ ಆದೇಶ ಬಂದಿದೆ. ಆರೋಪಿಗಳ ಸ್ಥಳಾಂತರಕ್ಕೆ ಚೀಫ್ ಸೂರ್ಪಡೆಂಟ್ ಅವರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಆದೇಶ ಸಿಕ್ಕಿರುವುದರಿಂದ ಎಲ್ಲ ಆರೋಪಿಗಳ ಸ್ಥಳಾಂತರ ಪ್ರಕ್ರಿಯೆ ಆರಂಭಿಸಲಾಗಿದೆ.

ದರ್ಶನ್​ ಶಿಫ್ಟ್​ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವ ವ್ಯವಸ್ಥೆ ಇದೆ.

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಲಿದ್ದು, ಪವನ್ , ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಶಿಫ್ಟ್​ ಆಗಬೇಕಿದೆ. ಜಗದೀಶ್​ಗೆ ಶಿವಮೊಗ್ಗ ಜೈಲು, ಧನರಾಜ್​ಗೆ ಧಾರವಾಡ ಜೈಲು ಗತಿಯಾಗಿದೆ. ವಿಜಯಪುರ ಜೈಲಿಗೆ ವಿನಯ್​ ಸ್ಥಳಾಂತರ ಆಗಬೇಕಿದೆ. ನಾಗರಾಜ್​ ಕಲಬುರಗಿ ಜೈಲು, ಲಕ್ಷ್ಮಣ ಶಿವಮೊಗ್ಗ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ.

ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರದಲ್ಲೇ ಮುಂದುವರಿಯಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!