HomeGadag Newsಶಿಕ್ಷಣ ಕ್ಷೇತ್ರದಲ್ಲಿ ರಡ್ಡೇರರ ಸೇವೆ ಶ್ಲಾಘನೀಯ : ಎಸ್.ವಿ. ಸಂಕನೂರ

ಶಿಕ್ಷಣ ಕ್ಷೇತ್ರದಲ್ಲಿ ರಡ್ಡೇರರ ಸೇವೆ ಶ್ಲಾಘನೀಯ : ಎಸ್.ವಿ. ಸಂಕನೂರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಸುಧಾರಿಸುವಲ್ಲಿ ವಿನೂತನ ಯೋಜನೆಗಳನ್ನು ಜಾರಿಗೆ ತಂದು ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ರಾಜ್ಯದಲ್ಲಿ 27ನೇ ಸ್ಥಾನದಲ್ಲಿದ್ದ ಗದಗ ಜಿಲ್ಲೆಯನ್ನು 17ನೇ ಸ್ಥಾನಕ್ಕೆ ತಂದ ಕೀರ್ತಿ ನಿವೃತ್ತ ಉಪನಿರ್ದೇಶಕ ಎಮ್.ಎ. ಡಡ್ಡೇರ ಅವರಿಗೆ ಸಲ್ಲುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಇತ್ತೀಚೆಗೆ ಗದಗ ನಗರದ ನಿರೀಕ್ಷಣಾ ಮಂದಿರದಲ್ಲಿ ಗದಗ ಜಿಲ್ಲೆಯ ವಿವಿಧ ಶಿಕ್ಷಕ ಸಂಘಟನೆಯವರು ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಎಮ್.ಎ. ರಡ್ಡೇರ ಅವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ, ವಿಷಯ ಪರಿವೀಕ್ಷಕರಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಹಾಗೂ ಉಪನಿರ್ದೇಶಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅವಿಸ್ಮರಣೀಯ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ, ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಮ್.ಕೆ. ಲಮಾಣಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಮ್. ಹಿರೇಮಠ, ಪದವಿಪೂರ್ವ ನೌಕರರ ಸಂಘದ ಜಿಲ್ಲಾಧ್ಯಕ್ಷ ಪವಾಡಿಗೌಡ್ರ ಮುಂತಾದವರು ಮಾತನಾಡಿದವರು.

ಇತ್ತೀಚೆಗೆ ರಾಜ್ಯ ಪ್ರಶಸ್ತಿ ಪಡೆದ ರತ್ನಾ ಬದಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಹರ ಹಾಗೂ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಸ್. ಬುರಡಿ, ವಿ.ವಿ. ನಡವಿನಮನಿ, ಕೆ.ಬಿ. ಕೊಣ್ಣೂರ, ರವಿರಾಜ ಪವಾರ, ಬಿ.ಬಿ. ಹಡಪದ, ಎ.ಎಸ್. ಪಾಟೀಲ, ಡಿ.ಎನ್. ಮರಡ್ಡಿ, ಎನ್.ಕೆ. ಪಾಟೀಲ, ಬಿ.ಡಿ. ಯರಗುಪ್ಪಿ, ಎಸ್.ಐ, ಮೇಟಿ, ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಾಚಾರ್ಯರಾದ ಅಶೋಕ ಅಂಗಡಿಯವರು ನೆರವೇರಿಸಿದರು. ನಿವೃತ್ತ ಮುಖ್ಯೋಪಾಧ್ಯಾಯಕ ಎನ್.ವಿ. ಜೋಷಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!