HomeBengaluru NewsGaganyaan Mission: ಇಸ್ರೋದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಯಶಸ್ವಿ

Gaganyaan Mission: ಇಸ್ರೋದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಯಶಸ್ವಿ

For Dai;y Updates Join Our whatsapp Group

ಬೆಂಗಳೂರು: ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆದಿದ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ವಾಹನ ಯಶಸ್ವಿಯಾಗಿ ಉಡಾವಣೆಯಾಗಿದೆ. ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ ಟಿವಿ-ಡಿ1 ರಾಕೆಟ್ ಉಡಾವಣೆ ಮಾಡಿದ್ದು, ಯಶಸ್ವಿಯಾಗಿ ಹಾರಾಟ ನಡೆಸಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ.

ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಹಾರಾಟ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಕ್ಕೆ ರಾಕೆಟ್ ಉಡಾವಣೆ ಮಾಡಲಾಯಿತು.

ಈ ಪರೀಕ್ಷೆಗೆ ಟಿವಿ-ಡಿ1′ ಎಂದು ಹೆಸರಿಸಲಾಗಿದೆ. ಇಂತಹ ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕ ಹಂತದ ರಾಕೆಟ್ ʻಟಿವಿ-ಡಿ1ʼ ನಭಕ್ಕೆ ಚಿಮ್ಮಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸು ಕಾಣುವ ನಿರೀಕ್ಷೆ ಇಸ್ರೋ ಹೊಂದಿದೆ.

TV-D1 ಪರೀಕ್ಷಾರ್ಥ ಹಾರಾಟವು ಗಗನಯಾನ ಮಿಷನ್ನ ನಿರ್ಣಾಯಕ ಭಾಗವಾಗಿದೆ. ಇದು ಮೂರು ವ್ಯಕ್ತಿಗಳ ಸಿಬ್ಬಂದಿಯನ್ನು 3 ದಿನಗಳ ಕಾರ್ಯಾಚರಣೆಗಾಗಿ 400 ಕಿಲೋಮೀಟರ್ ಕಕ್ಷೆಗೆ ಕಳುಹಿಸುವುದು, ಈ ಮೂಲಕ ಹಿಂದೂ ಮಹಾಸಾಗರದ ನೀರಿನಲ್ಲಿ ಸೇಫ್ ಲ್ಯಾಂಡಿಂಗ್ ಮತ್ತು ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳುವುದು ಇದರೊಂದಿಗೆ ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಭಾರತದ ಸಾಮರ್ಥ್ಯ ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img