HomeGadag Newsಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗಿಕರಣ ಸಮೀಕ್ಷೆ: ತರಬೇತಿದಾರರ ಕಾರ್ಯಾಗಾರದಲ್ಲಿ ಡಿಸಿ ಸೂಚನೆ

ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗಿಕರಣ ಸಮೀಕ್ಷೆ: ತರಬೇತಿದಾರರ ಕಾರ್ಯಾಗಾರದಲ್ಲಿ ಡಿಸಿ ಸೂಚನೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಗೆ ಒಪ್ಪಿಗೆ ಸೂಚಿಸಲಾಗಿರುವುದು ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರುಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತು ತಾಲೂಕು ಮಟ್ಟದ ತರಬೇತಿದಾರರ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡುತ್ತಿದ್ದರು.

ಈ ಹಿನ್ನೆಲೆಯಲ್ಲಿ ದತ್ತಾಂಶ ಸಂಗ್ರಹಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ. ಮೇ. 5ರಿಂದ ಮೇ. 17ರವರೆಗೆ ಸಮೀಕ್ಷೆದಾರರು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವರು. ಮೇ. 19ರಿಂದ ಮೇ. 21ರವರೆಗೆ ಸಮೀಕ್ಷೆ ಬ್ಲಾಕ್‌ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಹೇಶ ಪೋತದಾರ, ತಾಲೂಕು ಮಟ್ಟದ ತರಬೇತಿದಾರರು ಹಾಜರಿದ್ದರು.

ಸಂಪನ್ಮೂಲ ವ್ಯಕ್ತಿ ಬಿ.ಜಿ. ಗಿರಿತಿಮ್ಮಣ್ಣವರ ಸೇರಿದಂತೆ ಮಾಸ್ಟರ್ ಟ್ರೈನರ್‌ಗಳು ತರಬೇತಿದಾರರಿಗೆ ತರಬೇತಿ ನಡೆಸಿಕೊಟ್ಟರು.

ಸರ್ಕಾರದ ಸೌಲಭ್ಯಗಳು ಪರಿಶಿಷ್ಟ ಜಾತಿಯ ಒಳಪಂಗಡಗಳಿಗೆ ಸಮಾನವಾಗಿ ತಲುಪಬೇಕು ಎನ್ನುವ ಹಿನ್ನೆಲೆಯಲ್ಲಿ ಈ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಮನೆ ಮನೆಗೆ ಹೋಗಿ ಸಮೀಕ್ಷೆದಾರರು ಸಮೀಕ್ಷೆ ಮಾಡುವಾಗ ಸಹನೆ, ತಾಳ್ಮೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!