ವಿಜಯಸಾಕ್ಷಿ ಸುದ್ದಿ, ಗದಗ : ಗದಗ ನಗರದ ರಸ್ತೆಗಳಲ್ಲಿ ಬೀದಿ ಗೋವುಗಳು ಓಡಾಡುತ್ತಿದ್ದು, ಜನರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗಿ, ಅಪಾಯಕ್ಕೆ ಕಾರಣವಾಗುತ್ತಿದೆ. ಕೂಡಲೇ ನಗರಸಭೆಯ ಅಧಿಕಾರಿಗಳು ಹಾಗೂ ಆರಕ್ಷಕ ನಿರೀಕ್ಷಕರು ಜನರ ಹಿತದೃಷ್ಟಿಯಿಂದ ಈ ಗೋವುಗಳನ್ನು ಗೋಶಾಲೆಗೆ ರವಾನಿಸಬೇಕೆಂದು ಕ್ರಾಂತಿ ಸೇನಾ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರವೀಣ ಹಬೀಬ ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂತಹ ಜಾನುವಾರುಗಳಿಂದ ಸಾಕಷ್ಟು ಜನ ಅಪಾಯಕ್ಕೆ ಒಳಗಾಗಿದ್ದಾರೆ. ವಾಹನ ಸವಾರರ ಮೇಲೆ ದಾಳಿ ಮಾಡಿರುವ, ಗುದ್ದಿ ಸಾವನ್ನಪ್ಪಿರುವ ಘಟನೆಯೂ ನಡೆದಿದೆ. ಇಂತಹ ಘಟನೆಗಳಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.
ಕಾರಣ, ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಬೀದಿ ಗೋವುಗಳನ್ನು ಹಿಡಿದು ಗೋಶಾಲೆಗೆ ರವಾನಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.



