HomeGadag Newsಶಿರಹಟ್ಟಿ: ಎಸ್‌ಐಆರ್‌ನಲ್ಲಿ ಶೇ.100 ಸಾಧನೆ

ಶಿರಹಟ್ಟಿ: ಎಸ್‌ಐಆರ್‌ನಲ್ಲಿ ಶೇ.100 ಸಾಧನೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ಕಾರ್ಯದಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರ ಶೇ.100 ಪ್ರಗತಿ ಸಾಧಿಸುವ ಮೂಲಕ ಗದಗ ಜಿಲ್ಲೆಯಲ್ಲೇ ಮೊದಲ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳನ್ನು ಒಳಗೊಂಡಿರುವ ಕ್ಷೇತ್ರದಲ್ಲಿ ಒಟ್ಟು 252 ಮತಗಟ್ಟೆ ವ್ಯಾಪ್ತಿಯಲ್ಲಿ 2,30,268 ಎನ್ಯೂಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿತ್ತು. ಜುಲೈ 30ರ ವೇಳೆಗೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಶೇ.100 ಪ್ರಗತಿ ದಾಖಲಾಗಿದೆ.

ಕ್ಷೇತ್ರದಲ್ಲಿ 7,236 ಮೃತ ಮತದಾರರು, 17,787 ಸ್ಥಳಾಂತರಗೊಂಡವರು, 3,427 ದ್ವಿಪಾತ್ರ ಮತದಾರರು, 1,140 ಗೈರು ಮತದಾರರು ಹಾಗೂ ಇತರೆ 56 ಪ್ರಕರಣಗಳು ಸೇರಿ ಒಟ್ಟು 29,646 ದಾಖಲೆಗಳನ್ನು ಪರಿಶೀಲಿಸಿ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.

ಈ ಸಾಧನೆಯ ಹಿಂದೆ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಬಿಎಲ್‌ಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ನಡೆಸಿದ ಸತತ ಸಭೆಗಳು, ಕ್ಷೇತ್ರ ಭೇಟಿ, ಸಮಸ್ಯೆಗಳ ತ್ವರಿತ ಪರಿಹಾರ ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಮನ್ವಯ ಸಭೆಗಳು ಪ್ರಮುಖ ಕಾರಣವಾಗಿವೆ.

ಮರಣ ಹೊಂದಿರುವ, ಸ್ಥಳಾಂತರಗೊಂಡಿರುವ, ದ್ವಿಪಾತ್ರ ಹಾಗೂ ಗೈರು ಮತದಾರರ ಪಟ್ಟಿಯ ಕ್ರಾಸ್‌ ವೆರಿಫಿಕೇಶನ್ ಕಾರ್ಯ ಮುಂದುವರಿದಿದ್ದು, ಅರ್ಹರಿಗೆ ಅಗತ್ಯ ದಾಖಲೆಗಳ ಆಧಾರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಬಿಎಲ್‌ಒಗಳು ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಕಾರ್ಯದಲ್ಲಿ ಶೇ.100 ಪ್ರಗತಿ ಸಾಧಿಸಲು ಸಾಧ್ಯವಾಗಿದೆ.”

– ನಂದಾ ಹಣಬರಹಟ್ಟಿ, ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಉಪನಿರ್ದೇಶಕಿ

“ಬಿಎಲ್‌ಒಗಳು, ವಿಎಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಪಿಡಿಒಗಳು, ಇಒಗಳು, ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಈ ಸಾಧನೆ ಸಾಧ್ಯವಾಗಿದೆ.”

– ತಹಸೀಲ್ದಾರ್, ಶಿರಹಟ್ಟಿ (ಸಹಾಯಕ ಮತದಾರರ ನೋಂದಣಾಧಿಕಾರಿ)

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img