Homecultureಅದ್ಧೂರಿಯಾಗಿ ಜರುಗಿದ ಶಿವಾಜಿ ಜಯಂತಿ

ಅದ್ಧೂರಿಯಾಗಿ ಜರುಗಿದ ಶಿವಾಜಿ ಜಯಂತಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನು ಗದಗ-ಬೆಟಗೇರಿ ಅವಳಿ ನಗರದಲ್ಲಿ ಕಳೆದ ೮ ವರ್ಷಗಳಿಂದ ಅತ್ಯಂತ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ವರ್ಷವೂ ಶಿವಾಜಿ ಜಯಂತಿಯನ್ನು ಅಷ್ಟೇ ವಿಜೃಂಭಣೆಯಿAದ ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

೨೦೨೪ರ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಎಸ್.ಪಿ. ಅಧ್ಯಕ್ಷತೆಯಲ್ಲಿ ನಗರದ ರಾಚೋಟೇಶ್ವರ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಜುಮ್ಮಾ ಮಸೀದಿ, ಪಂಚ ರೌಂಡ, ಬಸವೇಶ್ವರ ಸರ್ಕಲ್, ಹುಯಿಲಗೋಳ ನಾರಾಯಣರಾವ್ ವೃತ್ತ, ಮಹೇಂದ್ರಕರ್ ಸರ್ಕಲ್, ತೋಂಟದಾರ್ಯ ಆಟೋ ನಿಲ್ದಾಣ, ಗಾಂಧಿ ಸರ್ಕಲ್ ಮಾರ್ಗವಾಗಿ ನಗರಸಭೆಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಂಪನ್ನಗೊಂಡಿತು.

ಮೆರವಣಿಗೆಯುದ್ದಕ್ಕೂ ಯುವಕರು ಡಿಜೆ ಹಾಡಿಗೆ ಭರ್ಜರಿ ಡ್ಯಾನ್ಸ್ ಮಾಡಿದರು. ಮೆರವಣಿಗೆ ಕಾರ್ಯಕ್ರಮದಲ್ಲಿ ಸುಮಾರು ೨೫ ಸಾವಿರಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಹಾಗೂ ಶ್ರೀರಾಮ ಭಕ್ತರು ಭಾಗವಹಿಸಿದ್ದರು. ಇದೇ ವೇಳೆ ೨೧ ಅಡಿ ಎತ್ತರದ ಶ್ರೀ ರಾಮನ ಮೂರ್ತಿ, ಶಿವಾಜಿ ಮೂರ್ತಿ, ವಾಲ್ಮೀಕಿ ಮಹರ್ಷಿಗಳ ಮೂರ್ತಿ ಸೇರಿದಂತೆ ಹಲವು ಮಹಾ ಪುರುಷರ ಮೂರ್ತಿಗಳ ಮೆರವಣಿಗೆ ನಡೆಯಿತು.

LEAVE A REPLY

Please enter your comment!
Please enter your name here

E-Paper

E-paper

Must Read

spot_img