ಶಿವಮೊಗ್ಗ: ಶಿವಶಂಕರಪ್ಪನವರ ಅಗಲಿಕೆ ಇಡೀ ಸಮಾಜಕ್ಕೆ ದೊಡ್ಡ ಆಘಾತ ತಂದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಿವಶಂಕರಪ್ಪನವರ ಅಗಲಿಕೆ ಇಡೀ ಸಮಾಜಕ್ಕೆ ದೊಡ್ಡ ಆಘಾತ ತಂದಿದೆ. ಅವರದ್ದು ಬಹಳ ದೊಡ್ಡ ವ್ಯಕ್ತಿತ್ವ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕೊಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ನಾನು ಅವರ ಅಂತಿಮ ದರ್ಶನ ಪಡೆಯಲು ದಾವಣಗೆರೆಗೆ ತೆರಳುತ್ತಿದ್ದೇನೆ. ಅವರ ಮತ್ತು ನನ್ನ ನಡುವೆ ಬಹಳ ವರ್ಷಗಳಿಂದ ಆತ್ಮೀಯ ಸಂಬಂಧವಿದೆ. ಇತ್ತೀಚಿಗೆ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿದ್ದೆ. ಅವರು ಎಲ್ಲಾ ಸಮಯದಲ್ಲೂ ಎಲ್ಲಾ ರೀತಿಯ ಸಹಕಾರ ನೀಡಿದಂತಹ ವ್ಯಕ್ತಿ. ಅವರ ಬಗ್ಗೆ ಹೇಳಲು ಬಹಳಷ್ಟಿದೆ. ವೀರಶೈವ ಸಮಾಜ ಸೇರಿದಂತೆ ಎಲ್ಲಾ ಸಮಾಜಕ್ಕೂ ಅವರ ಕೊಡುಗೆ ಅಪಾರವಿದೆ ಎಂದು ಹೇಳಿದರು.
ಶಾಮನೂರು ಶಿವಶಂಕರಪ್ಪನವರ ಅಂತಿಮ ದರ್ಶನದ ಬಳಿಕ ದಾವಣಗೆರೆಯ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಸಂಜೆ 5 ಗಂಟೆಯ ಸುಮಾರಿಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಶಾಮನೂರು ಅವರ ಧರ್ಮಪತ್ನಿ ಪಾರ್ವತಮ್ಮ ಸಮಾಧಿ ಕಲ್ಲೇಶ್ವರ ಮಿಲ್‌ನಲ್ಲಿದೆ ಅಲ್ಲಿಯೇ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ನಡೆಯಲಿದೆ.



